ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls 2024: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ

Published 20 ಮೇ 2024, 5:20 IST
Last Updated 20 ಮೇ 2024, 5:20 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಇಂದು (ಸೋಮವಾರ) ನಡೆಯುತ್ತಿದೆ.

ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತದಾರರಿಗೆ ಕರೆ ನೀಡಿದ್ದಾರೆ.

‘ಲೋಕಸಭೆ ಚುನಾವಣೆಯ 5ನೇ ಹಂತದಲ್ಲಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಜನರಲ್ಲಿ ಮನವಿ ಮಾಡುತ್ತೇನೆ. ವಿಶೇಷವಾಗಿ ಮಹಿಳಾ ಮತದಾರರು ಮತ್ತು ಯುವ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ನಾನು ವಿನಂತಿಸುತ್ತೇನೆ’ ಎಂದು ಮೋದಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಬಿಜೆಪಿಯ ಸ್ಮೃತಿ ಇರಾನಿ (ಅಮೇಠಿ), ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್ (ಲಖನೌ) ಮತ್ತು ಪೀಯೂಷ್‌ ಗೋಯಲ್ (ಮುಂಬೈ ಉತ್ತರ), ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಹಾಗೂ ಆರ್‌ಜೆಡಿಯ ರೋಹಿಣಿ ಆಚಾರ್ಯ (ಸಾರಣ್) ಅವರು ಕಣದಲ್ಲಿದ್ದಾರೆ.

ಐದನೇ ಹಂತದಲ್ಲಿ ಬಿಹಾರ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಜಾರ್ಖಂಡ್, ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯುತ್ತಿದೆ. ಲೋಕಸಭಾ ಚುನಾವಣೆ ಜತೆಯಲ್ಲೇ ಒಡಿಶಾದ 35 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯುತ್ತಿದ್ದು, ಬಿಜೆಡಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಕಣದಲ್ಲಿದ್ದಾರೆ.

ನಾಲ್ಕನೇ ಹಂತದ ಮತದಾನದ ಬಳಿಕವೂ ಪ್ರಚಾರದ ಕಣದಲ್ಲಿ ಬಿಜೆಪಿ ಮತ್ತು ‘ಇಂಡಿಯಾ’ ಒಕ್ಕೂಟದ ಮಧ್ಯೆ ಪರಸ್ಪರ ಆರೋಪ, ವಾಗ್ದಾಳಿ ನಡೆದಿದ್ದವು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮ ಮಂದಿರದ ಮೇಲೆ ಬುಲ್ಡೋಜರ್‌ ಹರಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಇದರ ವಿರುದ್ಧ ಕಾಂಗ್ರೆಸ್‌, ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT