ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದು ಮಾಮೂಲಿ ತೀರ್ಪಲ್ಲ: ಅಮಿತ್ ಶಾ

Published 15 ಮೇ 2024, 17:39 IST
Last Updated 15 ಮೇ 2024, 17:39 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಇದು ಮಾಮೂಲಿ ತೀರ್ಪಲ್ಲ ಎನ್ನುವುದು ನನ್ನ ನಂಬಿಕೆ’ ಎಂದಿದ್ದಾರೆ.

‘ಅವರಿಗೆ (ಕೇಜ್ರಿವಾಲ್) ವಿಶೇಷ ಪರಿಗಣನೆ ನೀಡಲಾಗಿದೆ ಎಂದು ದೇಶದ ಅನೇಕರು ಭಾವಿಸಿದ್ದಾರೆ’ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ ಒಂದರವರೆಗೆ ಜಾಮೀನು ನೀಡಿದೆ. 

ಪಿಒಕೆ ಮರಳಿ ಪಡೆಯುತ್ತೇವೆ: ಶ್ರೀರಾಮಪುರ (ಪಿಟಿಐ ವರದಿ): ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ)ಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಿಒಕೆ ಭಾರತದ ಭಾಗವಾಗಿದ್ದು, ಅದನ್ನು ನಾವು ಮರಳಿ ಪಡೆಯುತ್ತೇವೆ ಎಂದು ಬುಧವಾರ ಹೇಳಿದರು.

ಪಶ್ಚಿಮ ಬಂಗಾಳದ ಶ್ರೀರಾಮಪುರದಲ್ಲಿ ನಡೆದ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘370ನೇ ವಿಧಿ ಅಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ. ಆದರೆ. ಈಗ ಪಿಒಕೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿಂದೆ ಆಜಾದಿಯ ಘೋಷಣೆಗಳು ಇಲ್ಲಿ ಕೇಳಿಬರುತ್ತಿದ್ದವು. ಈಗ ಅವೇ ಘೋಷಣೆಗಳು ಅಲ್ಲಿ ಕೇಳಿಬರುತ್ತಿವೆ. ಹಿಂದೆ ಇಲ್ಲಿ ಕಲ್ಲು ಎಸೆಯುವುದು ನಡೆಯುತ್ತಿತ್ತು, ಈಗ ಅಲ್ಲಿ ನಡೆಯುತ್ತಿದೆ’ ಎಂದು ವಿಶ್ಲೇಷಿಸಿದರು.

ಪಿಒಕೆ ವಾಪಸ್ ಪಡೆಯುವ ವಿಚಾರದಲ್ಲಿ ಕಾಂಗ್ರೆಸ್ ಬೆಂಬಲ ನೀಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ ಅವರು, ‘ಮಣಿಶಂಕರ್ ಅಯ್ಯರ್‌ ಅವರಂಥ ಕಾಂಗ್ರೆಸ್ ನಾಯಕರು, ಪಾಕ್ ಬಳಿ ಅಣ್ವಸ್ತ್ರ ಇರುವುದರಿಂದ ಹಾಗೆ ಮಾಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಆದರೆ, ಪಿಒಕೆ ಭಾರತದ ಭಾಗ, ಅದನ್ನು ನಾವು ಪಡೆಯುತ್ತೇವೆ’ ಎಂದು ಹೇಳಿದರು.

‘ಶ್ರೀಕೃಷ್ಣನಂತೆ ಬಿಜೆಪಿಗೆ ಮೋದಿ ಮಾರ್ಗದರ್ಶನ’

ಜಲೌನ್ (ಪಿಟಿಐ): ಬಿಜೆಪಿ ವಿರೋಧಿಗಳನ್ನು ‘ದುರ್ಯೋಧನ’, ‘ದುಶ್ಯಾಸನ’ ಎಂದು ಬಣ್ಣಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮಹಾಭಾರತದ ಶ್ರೀ ಕೃಷ್ಣನಂತೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಯ ಮಹಾ ಯುದ್ಧದಲ್ಲಿ ಬಿಜೆಪಿಯನ್ನು ಜಯದತ್ತ ಮುನ್ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಜಲೌನ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ‘ಈ ಚುನಾವಣೆಯು ಧ್ರುವೀಕರಣದ ಬಗ್ಗೆ ಅಲ್ಲ. ಇದು ರಾಮಭಕ್ತರು ಮತ್ತು ರಾಮದ್ರೋಹಿಗಳನ್ನು ಕುರಿತದ್ದು’ ಎಂದು ನುಡಿದರು.

ಮೊದಲ ಪಟ್ಟಿಯಲ್ಲೇ ಬಿಜೆಪಿ ಟಿಕೆಟ್ ಘೋಷಣೆ ಮಾಡಿತ್ತು. ಆದರೆ, ಪವನ್ ಸಿಂಗ್ ಸ್ಪರ್ಧಿಸಲು ನಿರಾಕರಿಸಿದ್ದರು. ಅದರಿಂದ ಪಕ್ಷಕ್ಕೆ ಭಾರಿ ಮುಜುಗರವಾಗಿತ್ತು. ಆದರೆ, ನಂತರ ಪವನ್ ಸಿಂಗ್ ಕಾರಾಕಾಟ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.      

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT