ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ರಾಮ ಮತ್ತು ಕೃಷ್ಣನ ಅಂಶ: ನಟಿ ಕಂಗನಾ ರನೌತ್

Published 3 ಏಪ್ರಿಲ್ 2024, 16:16 IST
Last Updated 3 ಏಪ್ರಿಲ್ 2024, 16:16 IST
ಅಕ್ಷರ ಗಾತ್ರ

ಮಂಡಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮತ್ತು ಕೃಷ್ಣನ ಅಂಶವಾಗಿದ್ದಾರೆ ಎಂದು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ಬುಧವಾರ ಹೇಳಿದ್ದಾರೆ.

ಕರ್ಸೋಗ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, ‘ಮೊದಲ ಬಾರಿಗೆ ಮಹಿಳೆಯರು ತಮ್ಮ ಬಗ್ಗೆ ಕಾಳಜಿ ತೋರುತ್ತಿದ್ದಾರೆ ಎನ್ನುವ ಭಾವನೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರು ಮಹಿಳೆಯರ ವಿರುದ್ಧ ಅಸಭ್ಯ ಮತ್ತು ನಿಂದನೀಯ ಭಾಷೆ ಬಳಸುತ್ತಿದ್ದು, ಅದು ಅವರ ಸಂಕುಚಿತ ಮನೋಭಾವವನ್ನು ತೋರಿಸುತ್ತಿದೆ. ಮೋದಿ ‘ಮಂಡಿ’ಯ ಮಗಳನ್ನು ಅಭ್ಯರ್ಥಿಯನ್ನಾಗಿಸಿದ್ದು, ಅವರು ಮೂರನೇ ಬಾರಿ ಪ್ರಧಾನಿಯಾಗಲು ತನ್ನನ್ನು ಗೆಲ್ಲಿಸಬೇಕೆಂದು ಕಂಗನಾ ಮತದಾರರಲ್ಲಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT