ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Narendra Modi 3.0: ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮೋದಿ

Published 9 ಜೂನ್ 2024, 13:59 IST
Last Updated 9 ಜೂನ್ 2024, 13:59 IST
ಅಕ್ಷರ ಗಾತ್ರ

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಪ್ರಮಾಣವಚನ ಬೋಧಿಸಿದರು.

ಅವರ ಹಿಂದೆಯೇ, ರಾಜನಾಥ್‌ ಸಿಂಗ್, ಅಮಿತ್‌ ಶಾ ಶಪಥಗೈದರು.

ಬಳಿಕ ನಿತಿನ್‌ ಗಡ್ಕರಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ 72 ಮಂದಿ ಪ್ರಮಾಣವಚನ ಸ್ಪೀಕರಿಸಿದರು.

ಕರ್ನಾಟಕದ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT