ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಫಸಲ್ ಬಿಮಾ ಯೋಜನೆಯಿಂದ ಕಂಪನಿಗಳಿಗೆ ಲಾಭ: ಜೈರಾಮ್‌ ರಮೇಶ್‌

Published 28 ಮೇ 2024, 14:04 IST
Last Updated 28 ಮೇ 2024, 14:04 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯ (ಪಿಎಂಎಫ್‌ಬಿವೈ) ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವ ಬದಲು ಕೇಂದ್ರ ಸರ್ಕಾರವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಮಂಗಳವಾರ ಆರೋಪಿಸಿದ್ದಾರೆ.

ಈ ಯೋಜನೆಯಿಂದ ವಿಮಾ ಕಂಪನಿಗಳು ₹40,000 ಕೋಟಿ ಲಾಭ ಗಳಿಸಿವೆ. ಆದರೆ ವಿಮಾ ಪರಿಹಾರ ಹಣ ಸಿಗದೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ‘ಎಕ್ಸ್‌’ನಲ್ಲಿ ಉಲ್ಲೇಖಿಸಿದ್ದಾರೆ.  

‘ಪ್ರಧಾನಿ ನರೇಂದ್ರ ಮೋದಿ ಅವರು 2016ರಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿದ್ದರು. ಇದರಿಂದ ರೈತರು ಏನು ಪಡೆದುಕೊಂಡಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT