ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಯನಾಡಿನಲ್ಲಿ ರಾಹುಲ್‌ ಗಾಂಧಿ ಭರ್ಜರಿ ರೋಡ್‌ ಶೋ

Published 15 ಏಪ್ರಿಲ್ 2024, 7:22 IST
Last Updated 15 ಏಪ್ರಿಲ್ 2024, 7:22 IST
ಅಕ್ಷರ ಗಾತ್ರ

ವಯನಾಡು: ತಮ್ಮ ಸಂಸದೀಯ ಕ್ಷೇತ್ರ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ ಭರ್ಜರಿ ರೋಡ್‌ ಶೋ ನಡೆಸಿದ್ದಾರೆ. 

ಸುಲ್ತಾನ್‌ ಬತ್ತೇರಿ ಪ್ರದೇಶದಲ್ಲಿ ಕಾರಿನ ಮೇಲೆ ಕುಳಿತು ರಾಹುಲ್‌ ಗಾಂಧಿ ರೋಡ್‌ ಶೋ ನಡೆಸಿದ್ದು ರಸ್ತೆಯ ಇಕ್ಕೆಲಗಳಲ್ಲಿ ನೂರಾರು  ಕಾರ್ಯಕರ್ತರು ನೆರೆದಿದ್ದರು.

ರೋಡ್‌ ಶೋಗೂ ಮೊದಲು ತಮಿಳುನಾಡಿನ ಗಡಿಭಾಗದ ನೀಲಗಿರಿ ಜಿಲ್ಲೆಗೆ ತೆರಳಿ, ಅಲ್ಲಿನ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಕೃಷಿಕರೇ ಹೆಚ್ಚಾಗಿರುವ ಮಾನಂದವಾಡಿ, ವೆಲ್ಲಮುಂಡ ಮತ್ತು ಪಡಿಂಜರಥರಾ ಪ್ರದೇಶದಲ್ಲಿ ರೋಡ್ ಶೋ ನಡೆಸಿ ಅಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಜತೆಗೆ ಇತ್ತೀಚೆಗೆ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನದಿಂದ ವಿವಾದಕ್ಕೆ ಕಾರಣವಾಗಿದ್ದ ಮಾನಂದವಾಡಿ ಚರ್ಚ್‌ನ ಬಿಷಪ್ ಅವರನ್ನು ಭೇಟಿಯಾಗಿ ರಾಹುಲ್‌ ಚರ್ಚಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿಗೆ ರಾಹುಲ್‌ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ರಾಹುಲ್‌ ಹೆಲಿಕಾಪ್ಟರ್‌ ತಪಾಸಣೆ ಮಾಡಿದ ಚುನಾವಣಾ ಅಧಿಕಾರಿಗಳು

ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರ ಹೆಲಿಕಾಪ್ಟರ್‌ಅನ್ನು ಚುನಾವಣಾ ಅಧಿಕಾರಿಗಳು ಸೋಮವಾರ ತಪಾಸಣೆ ನಡೆಸಿದರು.

ಕೇರಳದ ವಯನಾಡ್‌ಗೆ ತೆರಳುವ ಮುನ್ನ ನೀಲಿಗಿರಿಗೆ ತೆರಳಲು ಹೆಲಿಕಾಪ್ಟರ್‌ ಲ್ಯಾಂಡ್‌ ಮಾಡಿದ್ದರು.

ರಾಹುಲ್‌ ಗಾಂಧಿ ಹೆಲಿಕಾಪ್ಟರ್‌ನಿಂದ ಇಳಿದ ನಂತರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಶೋಧ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT