ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಆರ್‌ಜೆಡಿ ಪ್ರಣಾಳಿಕೆ: 1 ಕೋಟಿ ಸರ್ಕಾರಿ ಉದ್ಯೋಗದ ಭರವಸೆ

Published 13 ಏಪ್ರಿಲ್ 2024, 15:30 IST
Last Updated 13 ಏಪ್ರಿಲ್ 2024, 15:30 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದಲ್ಲಿ ‘ಮಹಾಘಟಬಂಧನ’ದ ಜೊತೆಗಿರುವ ಆರ್‌ಜೆಡಿಯು ಶನಿವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಒಂದು ಕೋಟಿ ಸರ್ಕಾರಿ ಉದ್ಯೋಗದ ಭರವಸೆ ನೀಡಿದೆ.

ಬಡ ಕುಟುಂಬಗಳ ಸಹೋದರಿಯರಿಗೆ ರಕ್ಷಾಬಂಧನದಂದು ₹1ಲಕ್ಷ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಪ್ರಣಾಳಿಕೆಯನ್ನು (ಪರಿವರ್ತನ ಪತ್ರ) ಬಿಡುಗಡೆಗೊಳಿಸಿ ಮಾತನಾಡಿದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌, ಪಕ್ಷವು ಜನರಿಗೆ 24 ಭರವಸೆಗಳನ್ನು ನೀಡುತ್ತಿದ್ದು, ಅವುಗಳನ್ನು ಈಡೇರಿಸಲಿದೆ ಎಂದರು.

‘ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ₹500ಕ್ಕೆ ಎಲ್‌ಪಿಜಿ ಸಿಲಿಂಡರ್‌ ನೀಡಲಾಗುವುದು’ ಎಂದೂ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT