ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಹಂತದ ಚುನಾವಣೆ: ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ

Published 28 ಮಾರ್ಚ್ 2024, 4:20 IST
Last Updated 28 ಮಾರ್ಚ್ 2024, 4:20 IST
ಅಕ್ಷರ ಗಾತ್ರ

ನವದೆಹಲಿ: 12 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಲೋಕಸಭಾ ಕ್ಷೇತ್ರಗಳಿಗಾಗಿ ಏಪ್ರಿಲ್‌ 26ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್‌ 4 ಕೊನೆಯ ದಿನವಾಗಿದೆ. ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಏಪ್ರಿಲ್‌ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 6ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಎರಡನೇ ಹಂತದಲ್ಲಿ ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ತ್ರಿಪುರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ಸೇರಿದಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT