ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಮತ್ತೆ 4 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಯುಬಿಟಿ

Published 3 ಏಪ್ರಿಲ್ 2024, 14:30 IST
Last Updated 3 ಏಪ್ರಿಲ್ 2024, 14:30 IST
ಅಕ್ಷರ ಗಾತ್ರ

ಮುಂಬೈ: ಶಿವಸೇನಾ ಉದ್ಧವ್‌ ಠಾಕ್ರೆ ಬಣವು (ಯುಬಿಟಿ) ಮತ್ತೆ ನಾಲ್ಕು ಕ್ಷೇತ್ರಗಳಿಗೆ ಬುಧವಾರ ಅಭ್ಯರ್ಥಿಗಳನ್ನು ಘೋಷಿಸಿದೆ.

ಪ್ರತಿಷ್ಠಿತ ಕಲ್ಯಾಣ್‌ ಲೋಕಸಭಾ ಕ್ಷೇತ್ರದಿಂದ ವೈಷ್ಣವಿ ದರೇಕರ್‌ ರಾಣೆ ಅವರನ್ನು ಕಣಕ್ಕಿಳಿಸಲಾಗಿದೆ. ಪ್ರಸ್ತುತ ಈ ಕ್ಷೇತ್ರವನ್ನು ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಪುತ್ರ ಶ್ರೀಕಾಂತ್‌ ಶಿಂದೆ ಪ್ರತಿನಿಧಿಸುತ್ತಿದ್ದಾರೆ.

ಹಟ್ಕಾನಂಗಲೆ ಕ್ಷೇತ್ರದಿಂದ ಸತ್ಯಜಿತ್‌ ಪಾಟೀಲ್‌, ಪಾಲ್ಘರ್‌ನಿಂದ ಭಾರತಿ ಕಾಮದಿ ಮತ್ತು ಜಲಗಾಂವ್‌ನಿಂದ ಕರಣ್‌ ಪವಾರ್‌ ಸ್ಪರ್ಧಿಸಲಿದ್ದಾರೆ ಎಂದು ಉದ್ಧವ್‌ ಠಾಕ್ರೆ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಮಹಾರಾಷ್ಟ್ರದಲ್ಲಿ ಶಿವಸೇನಾ ಉದ್ಧವ್‌ ಠಾಕ್ರೆ ಬಣವು ಇದುವರೆಗೆ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT