ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ರೋಡ್ ಶೋ ಮೂಲಕ ಪ್ರಚಾರ ಕಣಕ್ಕೆ ಸುನಿತಾ ಕೇಜ್ರಿವಾಲ್

Published 25 ಏಪ್ರಿಲ್ 2024, 6:07 IST
Last Updated 25 ಏಪ್ರಿಲ್ 2024, 6:07 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಚಾರಕ್ಕೆ ಮುಖ್ಯಮಂತ್ರಿ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಬಲ ತುಂಬಲಿದ್ದು, ವಾರಾಂತ್ಯಕ್ಕೆ ಅವರು ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಅಬಕಾರಿ ಹಗರಣ ಸಂಬಂಧ ಜೈಲಿನಲ್ಲಿರುವ ಕೇಜ್ರಿವಾಲ್ ಅನುಪಸ್ಥಿತಿ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಕ್ಕೆ ಚುರುಕು ನೀಡಲು ಸುನಿತಾ ಮುಂದಾಗಿದ್ದಾರೆ. ಈ ಮೂಲಕ ತೆರೆಮರೆಯಲ್ಲೇ ದೊಡ್ಡ ಹುದ್ದೆಯತ್ತ ಸುನಿತಾ ಅಡಿ ಇಡುತ್ತಿದ್ದಾರೆ ಎನ್ನುತ್ತಿವೆ ವರದಿಗಳು.

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಪರ ಕೊಂಡ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ವಾರಾಂತ್ಯ ಸುನಿತಾ ಅವರ ಮೊದಲ ರ್‍ಯಾಲಿ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸಿರುವ ಉಳಿದ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಸುನಿತಾ ರೋಡ್ ಶೋ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಎಎಪಿ, ಪೂರ್ವ ದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಮತ್ತು ನವದೆಹಲಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಗುಜರಾತ್ ಮತ್ತು ಪಂಜಾಬ್‌ ರಾಜ್ಯಗಳಲ್ಲೂ ಎಎಪಿ ಅಭ್ಯರ್ಥಿಗಳ ಪರ ಸುನಿತಾ ಪ್ರಚಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಜರಾತ್‌ನ ಎಎಪಿ ಘಟಕದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲೂ ಸುನಿತಾ ಹೆಸರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT