ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಲೋಕಸಭಾ ಚುನಾವಣೆಯಲ್ಲಿ ಟಿಡಿಪಿ ಸ್ಪರ್ಧೆ ಇಲ್ಲ

Published 11 ಏಪ್ರಿಲ್ 2024, 12:34 IST
Last Updated 11 ಏಪ್ರಿಲ್ 2024, 12:34 IST
ಅಕ್ಷರ ಗಾತ್ರ

ಹೈದರಾಬಾದ್ : ‘ಲೋಕಸಭಾ ಚುನಾವಣೆಗೆ ತೆಲಂಗಾಣದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದಿರಲು ತೆಲುಗು ದೇಶಂ (ಟಿಡಿಪಿ) ಪಕ್ಷ ನಿರ್ಧರಿಸಿದೆ. ಆದರೆ, ಯಾರನ್ನು ಬೆಂಬಲಿಸಬೇಕು ಎನ್ನುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ’ ಎಂದು ಟಿಡಿಪಿ ವಕ್ತಾರರಾದ ಜ್ಯೋತ್ಸ್ನಾ ತಿರುನಗರಿ ಹೇಳಿದ್ದಾರೆ. 

ನೆರೆಯ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಎನ್‌ಡಿಎ ಭಾಗವಾಗಿದೆ. ಆದರೆ, ತೆಲಂಗಾಣದಲ್ಲಿ ಪಕ್ಷವು ಸ್ಪರ್ಧೆ ಮಾಡುವುದಿಲ್ಲ. ಯಾರನ್ನು ಬೆಂಬಲಿಸಬೇಕು ಎಂಬ ಬಗ್ಗೆ ಪಕ್ಷದ ಹಿರಿಯ ನಾಯಕರು ಮುಂದಿನ ದಿನಗಳಲ್ಲಿ ನಿರ್ಧರಿಸಲಿದ್ದಾರೆ. ಇದುವರೆಗೆ ಆ ಬಗ್ಗೆ ಯಾವುದೇ ಸೂಚನೆ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ಜೂನ್ ಅಥವಾ ಜುಲೈನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವು ಸ್ಪರ್ಧಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. 

ಪಕ್ಷದ ತೆಲಂಗಾಣ ಘಟಕಕ್ಕೆ ಅಧ್ಯಕ್ಷರನ್ನು ನೇಮಿಸುವ ಸಂಬಂಧ ಟಿಡಿಪಿಯ ವಾರ್ಷಿಕ ಸಮಾವೇಶದಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT