ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು | ಚುನಾವಣಾ ರ್‍ಯಾಲಿಯಲ್ಲಿ ಚಾಕು ಇರಿತ: NCಯ ಮೂವರು ಕಾರ್ಯಕರ್ತರಿಗೆ ಗಾಯ

Published 19 ಮೇ 2024, 11:14 IST
Last Updated 19 ಮೇ 2024, 11:14 IST
ಅಕ್ಷರ ಗಾತ್ರ

ಮೆಂಧರ್‌ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಮೆಂಧರ್‌ನಲ್ಲಿ ನ್ಯಾಷನಲ್‌ ಕಾನ್ಪರೆನ್ಸ್‌ ಪಕ್ಷದ ಚುನಾವಣಾ ರ್‍ಯಾಲಿ ನಡೆಯುವ ವೇಳೆ ಮೂವರು ಕಾರ್ಯಕರ್ತರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ರ್‍ಯಾಲಿಯಲ್ಲಿ ಪಕ್ಷದ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಕೂಡ ಹಾಜರಿದ್ದರು. ಅನಂತನಾಗ್‌–ರಜೌರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಿಯಾನ್ ಅಲ್ತಾಫ್ ಪರ ಮತಯಾಚನೆಗೆ ರ್‍ಯಾಲಿ ಆಯೋಜಿಸಲಾಗಿತ್ತು.

ರ್‍ಯಾಲಿ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ, ಈ ವೇಳೆ ಗಲಿಬಿಲಿ ಉಂಟಾದ ಕಾರಣ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಗಾಯಗೊಂಡ ಮೂವರು ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT