ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Modi 3.0: ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳಿಗೆ ಆಹ್ವಾನ, ಸರ್ಕಾರಕ್ಕೆ ಆಶೀರ್ವಾದ

Published 9 ಜೂನ್ 2024, 11:51 IST
Last Updated 9 ಜೂನ್ 2024, 11:51 IST
ಅಕ್ಷರ ಗಾತ್ರ

ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೃತೀಯಲಿಂಗಿ ಸಮುದಾಯದ 50 ಜನರಿಗೆ ಆಹ್ವಾನ ನೀಡಲಾಗಿದೆ.

ಸಮಾರಂಭಕ್ಕೂ ಮುನ್ನ ಬಿಜೆಪಿ ಸಂಸದ ಹಾಗೂ ಮಾಜಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಅವರು ತಮ್ಮ ನಿವಾಸದಲ್ಲಿ ತೃತೀಯಲಿಂಗಿ ಸಮುದಾಯದವರನ್ನು ಸನ್ಮಾನಿಸಿದ್ದಾರೆ.

‘ಇದು ಪ್ರಧಾನಿ ಮೋದಿಯವರ ‘ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌’ ಧ್ಯೇಯವಾಗಿದೆ. ಸಮಾರಂಭಕ್ಕೆ ತೃತೀಯಲಿಂಗಿಗಳಿಗೆ ಆಹ್ವಾನ ನೀಡಿರುವ ಉದ್ದೇಶ ಒಳಗೊಳ್ಳುವಿಕೆಯ ಸಂದೇಶವನ್ನು ಸಾರುವುದಾಗಿದೆ’ ಎಂದು ವೀರೇಂದ್ರ ಕುಮಾರ್ ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಇದೇ ಮೊದಲ ಬಾರಿಗೆ ತೃತೀಯಲಿಂಗಿ ಸಮುದಾಯದವರನ್ನು ಔಪಚಾರಿಕವಾಗಿ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.

ಇಂದು ಸಮಾರಂಭದಲ್ಲಿ ಭಾಗವಹಿಸುತ್ತಿರುವವರು ತೃತೀಯಲಿಂಗಿ ಸಮುದಾಯದ ಸಬಲೀಕರಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ.

ಹೊಸ ಸರ್ಕಾರಕ್ಕೆ ಆಶೀರ್ವಾದ ಮಾಡಲು ತೃತೀಯಲಿಂಗಿಗಳು ಬಂದಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ನಾಯಕ ಸೋನಮ್ ಕಿನ್ನರ್ ಹೇಳಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಇಂದು (ಭಾನುವಾರ) ರಾತ್ರಿ 7.15ಕ್ಕೆ ನಡೆಯುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಮಾರಂಭದಲ್ಲಿ ವಿದೇಶಿ ಗಣ್ಯರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಾವಿರಾರು ಮಂದಿ ಅತಿಥಿಗಳು ಭಾಗವಹಿಸಲಿದ್ದಾರೆ. ಎನ್‌ಡಿಎ ಮೈತ್ರಿ ಸರ್ಕಾರದ ಸಂಪುಟಕ್ಕೆ ಸುಮಾರು 30 ಮಂದಿ ಸೇರ್ಪಡೆಯಾಗಲಿದ್ದಾರೆ. ಮೊದಲ ಹಂತದಲ್ಲಿ ಮಿತ್ರ ಪಕ್ಷಗಳ 12ರಿಂದ 15 ಸದಸ್ಯರು ಸಂಪುಟಕ್ಕೆ ಸೇರುವ ಸಂಭವ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT