ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಧಾನಿ ಅಭ್ಯರ್ಥಿ ಯಾರೆಂದು ನಿರ್ಧರಿಸುತ್ತೇವೆ: ‘ಇಂಡಿಯಾ’ ಸಭೆಗೂ ಮುನ್ನ ಠಾಕ್ರೆ

Published 5 ಜೂನ್ 2024, 4:55 IST
Last Updated 5 ಜೂನ್ 2024, 4:55 IST
ಅಕ್ಷರ ಗಾತ್ರ

ಮುಂಬೈ: 543 ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 291 ಸ್ಥಾನಗಳನ್ನು ಹಾಗೂ 'ಇಂಡಿಯಾ' ಮೈತ್ರಿಕೂಟ 234 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಸರ್ಕಾರ ರಚಿಸುವ ಸಂಬಂಧ ಎನ್‌ಡಿಎ ಹಾಗೂ ಇಂಡಿಯಾ ನಾಯಕರು ಇಂದು ಸಭೆ ಸೇರಲಿದ್ದಾರೆ.

‘ಇಂಡಿಯಾ’ ಬಣದ ಸಭೆ ಕುರಿತು ಮಾತನಾಡಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ‘ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸಲು ಹಾಗೂ ಸಂವಿಧಾನವನ್ನು ಉಳಿಸಲು ನಾವು ಬದ್ಧರಾಗಿದ್ದೇವೆ. ಜತೆಗೆ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ’ ಎಂದು ಹೇಳಿದ್ದಾರೆ.

‘ಇಂಡಿಯಾ’ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗಾಣಿಸುವುದರ ಜತೆಗೆ ಸಂವಿಧಾನವನ್ನು ಉಳಿಸಬೇಕೆಂದು ನಿರ್ಧರಿಸಿದ್ದೆವು. ಆದೇ ನಿಟ್ಟಿನಲ್ಲಿ ಪ್ರಧಾನಿ ಅಭ್ಯರ್ಥಿ ಕುರಿತು ಚರ್ಚೆ ನಡೆಸುತ್ತೇನೆ ಎಂದಿದ್ದಾರೆ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡುಗೆ ಕಿರುಕುಳ ನೀಡುತ್ತಿದೆ ಎಂದು ಠಾಕ್ರೆ ಆರೋಪಿಸಿದ್ದಾರೆ.

ಈ ಬಾರಿ ಮಹಾರಾಷ್ಟ್ರದಲ್ಲಿ 45 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಕೇವಲ 17 ಸ್ಥಾನಗಳು ಸಿಕ್ಕಿವೆ. ಆದರೆ, ನಾವು (ಇಂಡಿಯಾ ಬಣ) 28 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ ಎಂದಿದ್ದಾರೆ.

‘ಇಂಡಿಯಾ’ ಮೈತ್ರಿಕೂಟವು ಮಹಾರಾಷ್ಟ್ರ ಸೇರಿದಂತೆ ದೇಶದಾದ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಸಂವಿಧಾನ ವಿರೋಧಿಗಳು ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ದೇಶದಲ್ಲಿ ಸ್ಥಾನವಿಲ್ಲ ಎಂಬುದನ್ನು ಜನರು ತೋರಿಸಿಕೊಟ್ಟಿದ್ದಾರೆ ಎಂದು ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT