ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರಾಹುಲ್ ಸ್ಪರ್ಧಿಸುತ್ತಿಲ್ಲ ಯಾಕೆ? ಗುಲಾಂ ನಬಿ

Published 18 ಏಪ್ರಿಲ್ 2024, 7:19 IST
Last Updated 18 ಏಪ್ರಿಲ್ 2024, 7:19 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಮ್ಮ ಕುಟುಂಬದ ರಾಜಕೀಯ ಪರಂಪರೆ ಅವಲಂಭಿಸಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್‌ ಆಜಾದ್‌ ಪಕ್ಷದ (ಡಿಪಿಎಪಿ) ಮುಖಂಡ ಗುಲಾಂ ನ‌ಬಿ ಆಜಾದ್‌ ಟೀಕಿಸಿದ್ದಾರೆ.

ಪಕ್ಷದ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು ಕಾಶ್ಮೀರದಲ್ಲಿ ಒಮರ್ ಅಬ್ದುಲ್ಲಾ ಹಾಗೂ ರಾಹುಲ್‌ ಗಾಂಧಿ ತಮ್ಮ ರಾಜಕೀಯ ಪರಂಪರೆಯನ್ನು ಅವಲಂಭಿಸಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ.

ರಾಹುಲ್‌ ಗಾಂಧಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸುರಕ್ಷಿತ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಅದರಲ್ಲೂ ಅಲ್ಪಸಂಖ್ಯಾತರು ಪ್ರಾಬಲ್ಯವಿರುವ ಸ್ಥಳಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಅವರು ಯಾಕೆ ಸ್ಪರ್ಧೆ ಮಾಡುವುದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ?

ಬಿಜೆಪಿ ವಿರುದ್ಧ ಹೋರಾಡುತ್ತೇನೆ ಎಂದು ರಾಹುಲ್‌ ಹೇಳಿಕೊಳ್ಳುತ್ತಾರೆ, ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳನ್ನು ಹೊರತುಪಡಿಸಿ ಅಲ್ಪಸಂಖ್ಯಾತ ಪ್ರಾಬಲ್ಯದ ರಾಜ್ಯಗಳಲ್ಲಿ ಏಕೆ ಆಶ್ರಯ ಪಡೆಯಬೇಕು ಎಂದು ಪ್ರಶ್ನೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT