ನವದೆಹಲಿ (ಪಿಟಿಐ): ಒಟ್ಟು 9 ಹಂತಗಳ ಲೋಕಸಭಾ ಚುನಾವಣೆಯ 8ನೇ ಹಂತದ ಚುನಾವಣೆ ಬುಧವಾರ ನಡೆಯಲಿದೆ. ದೇಶದ ಏಳು ರಾಜ್ಯಗಳ 64 ಕ್ಷೇತ್ರಗಳಲ್ಲಿ ಮತದಾನಕ್ಕೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. 64 ಕ್ಷೇತ್ರಗಳಿಗೆ 1,737 ಅಭ್ಯರ್ಥಿಗಳ ನಡುವೆ ಸ್ಪರ್ಧೆ ಇದ್ದು, ಇವರ ಭವಿಷ್ಯವನ್ನು 18.47 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.

ಬಿಹಾರ, ಪಶ್ಚಿಮ ಬಂಗಾಳ, ಸೀಮಾಂಧ್ರ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ ಹಾಗೂ ಜಮ್ಮು –ಕಾಶ್ಮೀರದಲ್ಲಿ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಪಾಲಿಗೆ ಈ ಹಂತದಲ್ಲಿ ಕಠಿಣ ಸವಾಲು ಎದುರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳ ಪೈಕಿ ಅರ್ಧದಷ್ಟು ಕ್ಷೇತ್ರಗಳಲ್ಲಿ ಜಯ ಗಳಿಸಿದ್ದ ಕಾಂಗ್ರೆಸ್ ಈ ಬಾರಿ ಇಲ್ಲಿ ಗೆಲುವಿಗೆ ಪ್ರಯಾಸ ಪಡಬೇಕಾದ ಸ್ಥಿತಿ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಬುಧವಾರ ನಡೆಯುತ್ತಿರುವ ಮತದಾನದ ಪ್ರದೇಶಗಳಲ್ಲಿ ಕಾಂಗ್ರೆಸ್ನ ಪ್ರಮುಖ ಎದುರಾಳಿಯಾದ ಬಿಜೆಪಿ ಕಳೆದ ಬಾರಿ ಕೇವಲ 5 ಕ್ಷೇತ್ರಗಳಲ್ಲಿ ಗೆದ್ದಿತ್ತು. 543 ಲೋಕಸಭಾ ಕ್ಷೇತ್ರಗಳ ಪೈಕಿ ಈಗಾಗಲೇ 7 ಹಂತಗಳಲ್ಲಿ 438 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

ಕಣದಲ್ಲಿನ ಪ್ರಮುಖ ಸ್ಪರ್ಧಿಗಳು
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಅಮೇಠಿ), ಬಿಜೆಪಿಯ ವರುಣ್ ಗಾಂಧಿ (ಸುಲ್ತಾನಪುರ), ಎಲ್ಜೆಪಿ ಅಧ್ಯಕ್ಷ ರಾಮ್ ವಿಲಾಸ್ ಪಾಸ್ವಾನ್ (ಹಾಜಿಪುರ), ಲಾಲು ಪ್ರಸಾದ್ ಪತ್ನಿ ರಾಬ್ಡಿ ದೇವಿ (ಸರನ್), ಕೇಂದ್ರ ಸಚಿವ ಬೇನಿ ಪ್ರಸಾದ್ ವರ್ಮಾ (ಗೊಂಡಾ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.