'ಕೇಂದ್ರ ಗೃಹ ಸಚಿವ ಅಮಿತ್ ಶಾ ನನಗೆ ಕರೆ ಮಾಡಿ ದೆಹಲಿಗೆ ಬುಧವಾರ ಬರುವಂತೆ ಸೂಚಿಸಿದ್ದಾರೆ. ನಾನೂ ಹೋಗುತ್ತಿದ್ದೇನೆ' ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ ಅಮಿತ್ ಶಾ ಕರೆ ಮಾಡಿದ್ದರು. ಹಿರಿಯ ನಾಯಕರು ಕರೆದಾಗ ಹೋಗಬೇಕಾಗುತ್ತದೆ ತಿಳಿಸಿದರು. ಚುನಾವಣೆಗೆ ಸ್ಪರ್ಧೆ ಮಾಡುವುದು ಬೇಡ ಎಂದು ಅಮಿತ್ ಶಾ ನನಗೆ ಸಲಹೆ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಿ ನಾಳೆಯೇ ಕಣದಿಂದ ಹಿಂದಕ್ಕೆ ಸರಿಯುವೆ ಎಂದು ಅವರಿಗೆ ಹೇಳಿದ್ದೇನೆ ಎಂಬುದಾಗಿ ತಿಳಿಸಿದರು. ದೆಹಲಿಗೆ ಬಂದಾಗ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವಂತೆ ಸೂಚಿಸುವಂತಿಲ್ಲ ಎಂದು ಅಮಿತ್ ಶಾ ಅವರಿಗೆ ಹೇಳಿದ್ದೇನೆ ಎಂಬುದಾಗಿಯೂ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.