ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

LS polls | ಬೀದರ್‌: ರಾಜಕೀಯ ಪಕ್ಷದ ಪರ ಪ್ರಚಾರ, ಆಹಾರ ಶಿರಸ್ತೇದಾರ ಅಮಾನತು

Published 1 ಮೇ 2024, 16:23 IST
Last Updated 1 ಮೇ 2024, 16:23 IST
ಅಕ್ಷರ ಗಾತ್ರ

ಬೀದರ್‌: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ರಾಜಕೀಯ ಪಕ್ಷವೊಂದರ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಕೈಗೊಂಡಿದ್ದ ಜಿಲ್ಲೆಯ ಔರಾದ್‌ (ಬಿ) ತಾಲ್ಲೂಕಿನ ತಹಶೀಲ್ದಾರ್‌ ಕಚೇರಿಯಲ್ಲಿ ಆಹಾರ ಶಿರಸ್ತೇದಾರ ಆಗಿ ಕೆಲಸ ನಿರ್ವಹಿಸುತ್ತಿದ್ದ ರವಿ ಸೂರ್ಯವಂಶಿ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ನೌಕರನಾಗಿ ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಕೈಗೊಂಡು ಅನಿಸಿಕೆ ವ್ಯಕ್ತಪಡಿಸುವುದು ನಿಯಮಬಾಹಿರ. ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಕೇಂದ್ರ ಸ್ಥಾನ ಬಿಡತಕ್ಕದಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT