ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

Published 17 ಏಪ್ರಿಲ್ 2024, 10:54 IST
Last Updated 17 ಏಪ್ರಿಲ್ 2024, 10:54 IST
ಅಕ್ಷರ ಗಾತ್ರ

ಬೆಂಗಳೂರು: 'ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌  ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್‌ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಬೇಕು' ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನಿಲ್‌ಕುಮಾರ್‌ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಕರ್ನಾಟಕದ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಪಕ್ಷದ ನಾಯಕರ ಆಶೀರ್ವಾದ ಇಲ್ಲದೇ ಇಂತಹ ಹೇಳಿಕೆಗಳನ್ನು ನೀಡಲು ಸಾಧ್ಯವೇ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ರಾಜ್ಯವನ್ನು ಒಡೆಯುವುದು ಕಾಂಗ್ರೆಸ್‌ ಪಕ್ಷದ ರಹಸ್ಯ ಕಾರ್ಯಸೂಚಿಯೇ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು. ವಿಚಿತ್ರವೆಂದರೆ ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್‌ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಲೂ ಮುಖ್ಯಮಂತ್ರಿ ಇದೇ ರೀತಿ ಮೌನ ವಹಿಸಿದ್ದರು ಎಂದು ಸುನಿಲ್‌ಕುಮಾರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT