ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್‌ ಹಂಚಿಕೆ: ಬಿಜೆಪಿ ದೂರು

Published 11 ಏಪ್ರಿಲ್ 2024, 15:23 IST
Last Updated 11 ಏಪ್ರಿಲ್ 2024, 15:23 IST
ಅಕ್ಷರ ಗಾತ್ರ

ಬೆಂಗಳೂರು: ಮತದಾರರಿಗೆ ಆಮಿಷ ಒಡ್ಡಲು ಕಾಂಗ್ರೆಸ್‌ ಪಕ್ಷ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ಗಾಂಧಿ ಅವರ ಮುದ್ರಿತ ಸಹಿ ಇರುವ ಗ್ಯಾರಂಟಿ ಕಾರ್ಡ್‌ ಹಂಚಲು ಮುಂದಾಗಿದೆ. ಇದನ್ನು ತಡೆಯಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ.

ಕಾನೂನು ಉಲ್ಲಂಘಿಸಿ ಮತದಾರರ ವೈಯಕ್ತಿಕ ಮಾಹಿತಿ ಕಲೆ ಹಾಕದಂತೆಯೂ ಕಾಂಗ್ರೆಸ್‌ಗೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಅಲ್ಲದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗ ಮತದಾರರ ವಿರುದ್ಧ ಸುಳ್ಳು, ಅಸಮರ್ಪಕ ಹೇಳಿಕೆಗಳನ್ನು ನೀಡಿದ್ದಾರೆ, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಬಿಜೆಪಿ–ಜೆಡಿಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿರುವ ಸಂಬಂಧ ದೂರುಗಳನ್ನು ನೀಡಲಾಗಿದೆ. ಗ್ರಾಮಾಂತರ ಕ್ಷೇತ್ರದಲ್ಲಿ ಕಾನೂನು– ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ ಮನವಿ ಮಾಡಿದೆ.

ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ ಮತ್ತು ಪ್ರಿಯಾಂಕ್‌ ಖರ್ಗೆ ಅವರು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಕೆಪಿಸಿಸಿಯ ಐಟಿ ವಿಭಾಗದಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇದರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ದೂರಿನಲ್ಲಿ ತಿಳಿಸಿದೆ.

ಬಿಜೆಪಿ ನಿಯೋಗದಲ್ಲಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್‌ ರೆಡ್ಡಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತಕುಮಾರ್‌  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT