ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಗೆ ಸರಿಸಮಾನ ವ್ಯಕ್ತಿ ಕಾಂಗ್ರೆಸ್‌ನಲ್ಲಿ ಇಲ್ಲ: ಯಡಿಯೂರಪ್ಪ

Published 2 ಮೇ 2024, 16:19 IST
Last Updated 2 ಮೇ 2024, 16:19 IST
ಅಕ್ಷರ ಗಾತ್ರ

ಗಜೇಂದ್ರಗಡ (ಗದಗ ಜಿಲ್ಲೆ): ‘ಕಾಂಗ್ರೆಸ್‌ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರೂ ನಾಯಕರಿಲ್ಲ. ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಅಂತ ಅವರ ಕಣ್ಣಮುಂದೆ ಇಲ್ಲ. ಮೋದಿಗೆ ಸರಿಸಮಾನ ವ್ಯಕ್ತಿ ಕಾಂಗ್ರೆಸ್‌ನಲ್ಲಿ ಯಾರೂ ಇಲ್ಲ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

‘ರಾಜ್ಯದ 28 ಕ್ಷೇತ್ರಗಳಲ್ಲಿ ಈಗಾಗಲೇ ಪ್ರವಾಸ ಮಾಡಿದ್ದೇನೆ. ರಾಜ್ಯದಲ್ಲಿನ 28 ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸ ಇದೆ. ಮೋದಿ ಹೆಸರಿನಲ್ಲಿ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಬಿಜೆಪಿ ಬೆಂಬಲಿಸುತ್ತಾರೆ. ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಎರಡು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತಾರೆ’ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿಗೆ ಮತ ಹಾಕಿದರೆ ಗ್ಯಾರಂಟಿಗಳನ್ನು ರದ್ದು ಮಾಡುತ್ತಾರೆ ಎಂಬ ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಅಭಿವೃದ್ಧಿ ಕಡೆಗೆ ವಿಶೇಷ ಗಮನ ನೀಡುತ್ತೇವೆ. ಆದರೆ, ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್‌ ದರ ಜಾಸ್ತಿ ಮಾಡಿದರು. ಕೇಂದ್ರದ ಕಿಸಾನ್‌ ಸಮ್ಮಾನ್‌ ಯೋಜನೆ ನಿಲ್ಲಿಸಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದಲೂ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಕೊಟ್ಟಿಲ್ಲ. ಸರ್ಕಾರ ದಿವಾಳಿ ಆಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT