ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ | ಜೆಡಿಎಸ್ ಸೇರ್ಪಡೆಯಾಗಿ ಬಿ–ಫಾರಂ ಪಡೆದ ಆಯನೂರು ಮಂಜುನಾಥ್

ಫಾಲೋ ಮಾಡಿ
Comments

ಚಿತ್ರದುರ್ಗ: ಬಿಜೆಪಿ ತೊರೆದಿರುವ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಬುಧವಾರ ಜೆಡಿಎಸ್ ಸೇರ್ಪಡೆಯಾದರು. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿ–ಫಾರಂ ಪಡೆದರು.

ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಲು ಹುಬ್ಬಳ್ಳಿಗೆ ತೆರಳುತ್ತಿದ್ದ ಅವರು ಚಿತ್ರದುರ್ಗ ಜೆಡಿಎಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದರು. ಗುರುವಾರ ನಾಮಪತ್ರ ಸಲ್ಲಿಸುವುದಾಗಿ ಮಾಹಿತಿ ನೀಡಿದರು.

'ಶಿವಮೊಗ್ಗದ ಶಾಂತಿ ಮತ್ತು‌ ಸುವ್ಯವಸ್ಥೆ ದೃಷ್ಟಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಫೆಬ್ರುವರಿಯಲ್ಲಿ ತೀರ್ಮಾನಿಸಿದ್ದೆ. ಬಿಜೆಪಿ ಟಿಕೆಟ್ ಕೈತಪ್ಪುವುದು ಖಚಿತವಾದ ಬಳಿಕ ಪಕ್ಷ ತೊರೆಯುವ ನಿರ್ಧಾರ ಮಾಡಿದೆ. ಸಿ.ಎಂ.ಇಬ್ರಾಹಿಂ ಹಾಗೂ ಕುಮಾರಸ್ವಾಮಿ ಅವರು ಜೆಡಿಎಸ್‌ಗೆ ಆಹ್ವಾನಿಸಿ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದಾರೆ' ಎಂದು ಪಕ್ಷ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT