ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಗಡಗಿ ಹೇಳಿಕೆ, ಬಿಜೆಪಿಯಿಂದ ವಿವಾದ ಸೃಷ್ಟಿಸುವ ಹುನ್ನಾರ; ಕಾಂಗ್ರೆಸ್ ಆರೋಪ

Published 27 ಮಾರ್ಚ್ 2024, 6:17 IST
Last Updated 27 ಮಾರ್ಚ್ 2024, 6:17 IST
ಅಕ್ಷರ ಗಾತ್ರ

ಕೊಪ್ಪಳ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳುವ ಯುವಕರ ಕಪಾಳಕ್ಕೆ ಹೊಡೆಯಿರಿ ಎನ್ನುವ ಹೇಳಿಕೆಯನ್ನೇ ದುರ್ಬಳಕೆ ಮಾಡಿಕೊಂಡಿರುವ ಬಿಜೆಪಿ ವಿವಾದ ಸೃಷ್ಟಿಸುವ ಹುನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ತಂಗಡಗಿ ಅವರು ಆಡುಭಾಷೆಯಲ್ಲಿ ಆ ರೀತಿಯ ಹೇಳಿಕೆ ನೀಡಿದ್ದು, ಅದನ್ನೇ ಬಿಜೆಪಿ ನಾಯಕರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಬಿಜೆಪಿ ವಿರುದ್ಧ ‌ನಾವೂ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳಲು ಬಿಜೆಪಿಯವರು ಎನೂ ಕೆಲಸ ಮಾಡಿಲ್ಲ. ಆದ್ದರಿಂದ ಅವರಿಗೆ ಇಂಥ ಸಣ್ಣ ವಿಷಯಗಳೇ ಬಂಡವಾಳ. ತಂಗಡಗಿ ತಮ್ಮ ಸ್ವಾರ್ಥ ಸಾಧನೆಗೆ ಹೇಳಿಕೆ ನೀಡಿಲ್ಲ. ನರೇಂದ್ರ ಮೋದಿ ನಡೆದುಕೊಂಡ ರೀತಿ, ಯುಜನತೆಗೆ ಆದ ಅನ್ಯಾಯವನ್ನು ಜನರ ಮಂದಿಟ್ಟಿದ್ದಾರೆ ಎಂದು ಸಮರ್ಥಿಸಿಕೊಂಡರು.

ನಾಡಿನ ಯುವಜನತೆ ಉದ್ಯೋಗದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಇಷ್ಟೊಂದು ವಿವಾದ ಸೃಷ್ಟಿಸುವ ಅಗತ್ಯವಿದೆಯೇ? ಎಂದು ಪ್ರಶ್ನಿಸಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ರೆಡ್ಡಿ ಗಲಬಿ, ಕೊಪ್ಪಳ ನಗರ ಬ್ಲಾಕ್‌ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಾಟನ್ ಪಾಷಾ, ನಗರಸಭೆ ಸ್ಥಾಯು ಸಮಿತಿ ಅಧ್ಯಕ್ಷ ಅಕ್ಬರ್ ಪಾಷಾ ಪಲ್ಟನ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT