ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಎರಡಂಕಿ ತಲುಪುವುದಿಲ್ಲ: ಡಿಕೆಶಿ

Published 19 ಏಪ್ರಿಲ್ 2024, 18:23 IST
Last Updated 19 ಏಪ್ರಿಲ್ 2024, 18:23 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ, ಕೇರಳ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿಜೆಪಿ ಯಾವ ರಾಜ್ಯಗಳಲ್ಲೂ ಹತ್ತು ಕ್ಷೇತ್ರಗಳಲ್ಲಿ ಗೆಲ್ಲುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್‌ ಮತ್ತು ಶಾರದಾ ಮೋಹನ ಶೆಟ್ಟಿ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, ‘ದೇಶದಲ್ಲಿ ಬಿಜೆಪಿ ತೊರೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹರ‍್ಯಾಣದಲ್ಲಿ ಬಿಜೆಪಿಯ ಹಾಲಿ ಸಂಸದರೇ ಕಾಂಗ್ರೆಸ್‌ ಸೇರಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗಳಿಸುವುದಿಲ್ಲ’ ಎಂದರು.

ಬಿಜೆಪಿಯ ನಾಯಕರು ಹೇಳುವಂತೆ ಅವರ ಪಕ್ಷ ಲೋಕಸಭಾ ಚುನಾವಣೆಯಲ್ಲಿ 400 ಕ್ಷೇತ್ರಗಳಲ್ಲಿ ಗೆಲ್ಲಲು ಸಾಧ್ಯವಿದ್ದರೆ ಇತರ ಪಕ್ಷಗಳ ನಾಯಕರನ್ನು ಸೇರಿಸಿಕೊಳ್ಳುವ ಅನಿವಾರ್ಯ ಏನಿತ್ತು ಎಂದು ಪ್ರಶ್ನಿಸಿದರು.

‘ಬಿಜೆಪಿ–ಜೆಡಿಎಸ್‌ ಮೈತ್ರಿಯನ್ನು ಆ ಎರಡೂ ಪಕ್ಷಗಳ ಕಾರ್ಯಕರ್ತರೇ ವಿರೋಧಿಸುತ್ತಿದ್ದಾರೆ. ಹೀಗಾಗಿ ಆ ಪಕ್ಷಗಳ ಹಲವರು ಕಾಂಗ್ರೆಸ್‌ನತ್ತ ಬರುತ್ತಿದ್ದಾರೆ. ಬಿಜೆಪಿ ಧ್ವನಿ ಕಳೆದುಕೊಂಡಿರುವ ಪಕ್ಷವಾಗಿದೆ. ಕಾಂಗ್ರೆಸ್‌ ಸೇರಲು ಬಯಸುವ ಎಲ್ಲರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಸ್ಥಳೀಯ ನಾಯಕರಿಗೆ ಸೂಚನೆ ನೀಡಿದ್ದೇನೆ’ ಎಂದು ಶಿವಕುಮಾರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT