ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಪ್ರೀತಂಗೌಡ ಆಪ್ತರಿಂದ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ

ಜೆಡಿಎಸ್‌ ಮುಖಂಡರಿಗೆ ಇರಿಸು–ಮುರಿಸು
Published 8 ಏಪ್ರಿಲ್ 2024, 10:01 IST
Last Updated 8 ಏಪ್ರಿಲ್ 2024, 10:01 IST
ಅಕ್ಷರ ಗಾತ್ರ

ಹಾಸನ: ಪ್ರೀತಂಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಲ ಬಿಜೆಪಿ ಮುಖಂಡರು, ಬಹಿರಂಗವಾಗಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಪ್ರಚಾರಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಜೆಡಿಎಸ್‌ ನಾಯಕರಿಗೆ ಇರಿಸು ಮುರಿಸು ಉಂಟಾಗಿದೆ.

ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಉದ್ದೂರು ಪುರುಷೋತ್ತಮ್ ಸೇರಿ ಹಲವರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಅವರನ್ನು ಭೇಟಿ ಮಾಡಿದ ಪ್ರೀತಂಗೌಡರ ಆಪ್ತರು, ಉದ್ದೂರು ಪುರುಷೋತ್ತಮ್ ನೇತೃತ್ವದಲ್ಲಿ ಬೆಂಬಲ ಘೋಷಿಸಿ ಪ್ರಚಾರ ಆರಂಭಿಸಿದ್ದಾರೆ.

ಪ್ರೀತಂಗೌಡರು ಎನ್.ಡಿ.ಎ. ಅಭ್ಯರ್ಥಿ ಪರ ನಿಲುವು ತಳೆದು ಸೂಚನೆ ನೀಡದ ಹಿನ್ನೆಲೆಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಶ್ರೇಯಸ್‌ ಪಟೇಲ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಉದ್ದೂರು ಪುರುಷೋತ್ತಮ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT