ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ನಡೆಯಲ್ಲಿ ಸಿದ್ದರಾಮಯ್ಯ ಪ್ರೇರಣೆ ಇಲ್ಲವೆಂದು ಅವರು ನಿರಾಕರಿಸುವರೇ? ಸುಧಾಕರ್ 

Published 17 ಮೇ 2023, 4:32 IST
Last Updated 17 ಮೇ 2023, 4:32 IST
ಅಕ್ಷರ ಗಾತ್ರ

ಬೆಂಗಳೂರು: 2018ರ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಾವು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಬಿಜೆಪಿಯ ಮಾಜಿ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಅವರು ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ. 

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ನಾವು ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.

ನಂತರ, 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಕುಮಾರಸ್ವಾಮಿ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಕೇಳಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಸುಧಾಕರ್‌ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಎದುರು ಪರಾಭವಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT