ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಅಕ್ರಮ ಸಾಗಣೆ: 108 ಸೀರೆ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

Published 21 ಮಾರ್ಚ್ 2024, 6:07 IST
Last Updated 21 ಮಾರ್ಚ್ 2024, 6:07 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ಸಾಗುತ್ತಿದ್ದ ಕಾರಿನಲ್ಲಿ 108 ಸೀರೆ ಪತ್ತೆಯಾಗಿದ್ದು, ದಾಖಲೆ ಹಾಜರುಪಡಿಸಲು ವಿಫಲರಾದ ಕಾರಣಕ್ಕೆ ಚುನಾವಣಾಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸೂಳಿಬಾವಿಯ ವಿನಾಯಕ ಎಂಬುವರಿಗೆ ಸೇರಿದ ಕಾರಿನಲ್ಲಿ ಸೀರೆ ಸಾಗಣೆ ಮಾಡುತ್ತಿರುವ ಬಗ್ಗೆ ಬುಧವಾರ ಸಂಜೆ ಚುನಾವಣಾಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ನಗರದ ಹೊರವಲಯದ ಜೆಎಂಐಟಿ ಚೆಕ್ ಪೋಸ್ಟ್ ಬಳಿ ವಾಹನ ಪರಿಶೀಲಿಸಿದಾಗ ಸೀರೆ ಪತ್ತೆಯಾಗಿವೆ.

ಕಾರಿನಲ್ಲಿ ವಿವಿಧ ಬಣ್ಣದ 108 ಸೀರೆಗಳಿಗೆ ಕಾರಿನ ಮಾಲೀಕರು ದಾಖಲೆ ಹಾಜರುಪಡಿಸಿಲ್ಲ. ಸೀರೆ ಹಾಗೂ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT