ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ರಾಮನಗರದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.
ಸುಳ್ಳೇ ಮೋದಿ ಗ್ಯಾರಂಟಿ. ಒಬ್ಬರು ಸುಳ್ಳು ಹೇಳಿದರೆ ಮತ್ತೊಬ್ಬರು ಕಣ್ಣೀರು ಹಾಕುತ್ತಾರೆ. ಕೆಲಸ ಮಾಡುವ ನಾನು ಬೇಕೋ ಅಥವಾ ಅವರು ಬೇಕೋ ಎಂದು ಜನ ತೀರ್ಮಾನಿಸಲಿ