‘ಬಿಜೆಪಿ ಸರ್ಕಾರದಲ್ಲಿ ದೇಶ ಅಭಿವೃದ್ಧಿ ಕಂಡಿದ್ದರೆ ತಾನೇ ಟ್ರೇಲರ್ ತೋರಿಸುವುದು? ಮುಂದೆ ಬರಲಿರುವುದು ನರೇಂದ್ರ ಮೋದಿ ಅವರ ಸುಳ್ಳಿನ ಸಿನಿಮಾ ಇರಬಹುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಮೈಸೂರಿನಲ್ಲಿ ಸೋಮವಾರ ಮಾತನಾಡಿದ ಅವರು, ‘ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು 200 ಕ್ಷೇತ್ರಗಳಲ್ಲಿ ಮಾತ್ರ. ಇದು ಅವರ ಸಮೀಕ್ಷೆಯಿಂದಲೇ ಗೊತ್ತಾಗಿದೆ. ಕಡಿಮೆ ಸ್ಥಾನ ಬರುತ್ತದೆ ಎಂದು ತಿಳಿದ ಮೇಲೆಯೇ ಹೆಚ್ಚು ಸ್ಥಾನ ಬರುತ್ತದೆ ಎಂದು ಬಿಂಬಿಸುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ನಾಯಕರು ಮಾಡುತ್ತಿದ್ದಾರೆ. ಇದು ಕೂಡ ಅವರ ತಂತ್ರಗಾರಿಕೆ. ರಾಜ್ಯದಲ್ಲಿ 18ರಿಂದ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ಬಿಜೆಪಿಯ ಸುಳ್ಳಿಗೆ ಯಾರೂ ಮರುಳಾಗುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.