ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಜಗದೀಶ ಶೆಟ್ಟರ್

Published 24 ಮಾರ್ಚ್ 2024, 16:11 IST
Last Updated 24 ಮಾರ್ಚ್ 2024, 16:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ. ಕಾಂಗ್ರೆಸ್‌ನಲ್ಲಿನ ಗುಂಪುಗಾರಿಕೆಯಿಂದ ಸರ್ಕಾರ ಪತನವಾಗಲಿದೆ. ನಾವು ಆಪರೇಷನ್ ಕಮಲ ಮಾಡುವ ಅವಶ್ಯಕತೆ ಇಲ್ಲ’ ಎಂದು ಬಿಜೆಪಿ ಮುಖಂಡ‌ ಜಗದೀಶ ಶೆಟ್ಟರ್  ಹೇಳಿದರು.

‘ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ’ ಎಂದು ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುತಂತ್ರ, ಒಳತಂತ್ರದ ಭಾಗವಾಗಿ ಅವರು ಈ ಹೇಳಿಕೆ ನೀಡಿದ್ದಾರೆ’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

‘ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು ₹50 ಕೋಟಿ ಆಮಿಷವೊಡುತ್ತಿದ್ದಾರೆ ಎಂಬುದು ಸುಳ್ಳು. ಯಾರು ಆಮಿಷವೊಡ್ಡಿದ್ದಾರೆ ಎಂಬುದನ್ನು ಸಿದ್ದರಾಮಯ್ಯ ಬಹಿರಂಗಪಡಿಸಬೇಕು. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂಬ ಭಯ ಕಾಂಗ್ರೆಸ್‌ನವರಿಗೆ ಶುರುವಾಗಿದೆ. ಹೀಗಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಸಿ ಸುಳ್ಳು ಹೇಳುತ್ತಿದ್ದಾರೆ’  ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT