ಬೆಂಗಳೂರು: ಜನರ ಬಳಿ ಹೋಗಿ ಮತಯಾಚಿಸುವ ಧೈರ್ಯ ಬಿಜೆಪಿಗಿದೆ. ಆದರೆ, ಕಾಂಗ್ರೆಸ್‌ಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಗುರುವಾರ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜತೆ ನಡೆಸಿದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯ ನಂತರ ಅವರು ಮಾತನಾಡಿದರು.

ವಿಧಾನಸಭಾ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಬೆಂಗಳೂರು ವ್ಯಾಪ್ತಿಯ ಕ್ಷೇತ್ರಗಳಲ್ಲಿ ಹಿಂದೆಯೂ ಬಿಜೆಪಿಗೆ ಬಹುಮತ ಸಿಕ್ಕಿದೆ. ಮೆಟ್ರೊ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಬಿಜೆಪಿ ನೀಡಿದೆ. ಈ ಎಲ್ಲ ಕಾರಣಗಳಿಂದಾಗಿ ಜನರ ಬಳಿ ಹೋಗಿ ಮತ ಯಾಚಿಸುವ ಹಕ್ಕು ಬಿಜೆಪಿಗಿದೆ. ಆದರೆ, ಕಾಂಗ್ರೆಸ್ ಸರ್ಕಾರ ‘ಬ್ರ್ಯಾಂಡ್ ಬೆಂಗಳೂರು’ ಎನ್ನುತ್ತಾ ಕುಡಿಯುವ ನೀರು ಇಲ್ಲದಂತೆ ಮಾಡಿದೆ. ಜನರು ನಗರ ತೊರೆದು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇರಳ ಸರ್ಕಾರ ಐಟಿ ಕಂಪನಿಗಳ ಮುಖ್ಯಸ್ಥರಿಗೆ ಪತ್ರ ಬರೆದು ‘ಬೆಂಗಳೂರಲ್ಲಿ ಮುಖ ತೊಳೆಯಲು ಕೂಡ ನೀರಲ್ಲ, ನಮ್ಮಲ್ಲಿಗೆ ಬನ್ನಿ’ ಎಂದು ಆಹ್ವಾನಿಸಿದೆ. ಹಲವು ಕಂಪನಿಗಳು ನಗರವನ್ನು ಬಿಟ್ಟು ಹೋಗುತ್ತಿವೆ ಎಂದರು.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಗೆ ಕಳೆದ ಬಾರಿ 3.30 ಲಕ್ಷ ಲೀಡ್ ಬಂದಿದೆ. ಈ ಬಾರಿ ಇನ್ನೂ ಒಂದು ಲಕ್ಷ ಹೆಚ್ಚು ಲೀಡ್ ಬರುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.