ಬೆಳಗಾವಿ: ‘ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ಇಂಥ ಕ್ಷುಲ್ಲಕ ರಾಜಕಾರಣ ಶೋಭೆ ತರುವುದಿಲ್ಲ. ಗ್ಯಾರಂಟಿ ಬಿಟ್ಟು ಕೇವಲ ಪೆನ್‌ಡ್ರೈವ್ ಪ್ರಕರಣದಿಂದಲೇ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಉಮೇದಿನಲ್ಲಿದ್ದಾರೆ. ಅವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

‘ಈ ಪ್ರಕರಣ ಬಿಜೆಪಿಗೆ ಮುಳುವಾಗಲಿ ಎಂಬ ಅಪೇಕ್ಷೆ ಕಾಂಗ್ರೆಸ್‌ನವರದ್ದು. ಏಳೆಂಟು ದಿನಗಳಿಂದ ಗ್ಯಾರಂಟಿಗಳ ಬಗ್ಗೆ ವಿಶ್ವಾಸ ಕಳೆದುಕೊಂಡು, ಪೆನ್‌ಡ್ರೈವ್ ಮೇಲೆ ವಿಶ್ವಾಸ ಬೆಳೆಸಿಕೊಂಡಿದ್ದಾರೆ’ ಎಂದು ಅವರು ತಾಲ್ಲೂಕಿನ ಬಾಳೇಕುಂದ್ರಿ ಕೆ.ಎಚ್. ಗ್ರಾಮದಲ್ಲಿ ಶನಿವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಈ ಪ್ರಕರಣದಲ್ಲಿ ಬಿಜೆಪಿ ನಿಲುವು ಸ್ಪಷ್ಟ. ಯಾರೇ ತಪ್ಪಿತಸ್ಥರಿದ್ದರೂ ತನಿಖೆ ಎದುರಿಸಬೇಕು. ಇದರಲ್ಲಿ ಬೇರೆ ಮಾತಿಲ್ಲ’ ಎಂದೂ ಹೇಳಿದರು.

‘ಅಪಪ್ರಚಾರ ಮತ್ತು ಗ್ಯಾರಂಟಿಗಳ ಮೇಲೆ ಭರವಸೆ ಇಟ್ಟುಕೊಂಡ ಕಾಂಗ್ರೆಸ್‌ನವರು 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ, ಮತದಾರರು ಇವರ ಅಪಪ್ರಚಾರದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಹಾಗಾಗಿ 28 ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ’ ಎಂದು ತಿರುಗೇಟು ಕೊಟ್ಟರು.

‘ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬರುತ್ತದೆ’ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಮೋದಿ ಪ್ರಣಾಳಿಕೆಯಲ್ಲಿ ಪ್ರಕಟಿಸಿದ ಎಲ್ಲ ಭರವಸೆಗಳನ್ನು ಈಡೇರಿಸಿದ್ದಾರೆ. ಹಾಗಾಗಿ ಅವರ ಜನಪ್ರಿಯತೆ ಹೆಚ್ಚಿದ್ದು, ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.