ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿ ಈಡೇರಿಸಲಾಗದ ಕಾಂಗ್ರೆಸ್‌: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

Published 21 ಮೇ 2023, 12:27 IST
Last Updated 21 ಮೇ 2023, 12:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್‌, ಇದೀಗ ರಾಜ್ಯಕ್ಕೆ ತೆರಿಗೆ ವಿಕೇಂದ್ರೀಕರಣ ಅನುದಾನ ಸರಿಯಾಗಿ ಬಂದಿಲ್ಲ ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಕಾರಣಕ್ಕಾಗಿ ಕಾಂಗ್ರೆಸ್‌ ರಾಜ್ಯದ ಜನತೆಗೆ ಐದು ಭರವಸೆಗಳನ್ನು ನೀಡಿತ್ತು. ಅವುಗಳನ್ನು ಈಡೇರಿಸುವ ಆಸಕ್ತಿ ಅವರಲ್ಲಿಲ್ಲ. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾತ್ವಿಕ ಒಪ್ಪಿಗೆ ನೀಡಿದ್ದೇವೆ ಎನ್ನುತ್ತ ಕೇಂದ್ರ ಸರ್ಕಾರದಿಂದ ಅನುದಾನ ಕಡಿಮೆ ಬಂದಿದೆ ಎನ್ನುತ್ತಿದ್ದಾರೆ’ ಎಂದು ದೂರಿದರು.

‘2009 ರಿಂದ 2014ರವರೆಗೆ ರಾಜ್ಯಕ್ಕೆ ಹಂಚಿಕೆಯಾದ ತೆರಿಗೆ ವಿಕೇಂದ್ರೀಕರಣ ಅನುದಾನ ಶೇ 148ರಷ್ಟು, 2014 ರಿಂದ 2019ರ ಅವಧಿಯಲ್ಲಿ ಶೇ 129ರಷ್ಟು ಅನುದಾನ ಹಂಚಿಕೆ ಮಾಡಲಾಗಿದೆ’ ಎಂದರು.

‘ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ರಾಜ್ಯಕ್ಕೆ ₹700 ರಿಂದ ₹800 ಕೋಟಿ ಅನುದಾನವಷ್ಟೇ ಬರುತ್ತಿತ್ತು. ನಮ್ಮ ಆಡಳಿತದ ಅವಧಿಯಲ್ಲಿ ₹5 ಸಾವಿರದಿಂದ ₹7 ಸಾವಿರ ಕೋಟಿಗಳಷ್ಟು ಬಂದಿದೆ. 2009–10ರ ಅವಧಿಯಲ್ಲಿ ₹2,476 ಕೋಟಿ ಬಂದಿದ್ದರೆ, 2019–20ರ ಅವಧಿಯಲ್ಲಿ ₹7,578 ಕೋಟಿ, 2021–22ರ ಅವಧಿಯಲ್ಲಿ ₹7,862 ಕೋಟಿ ಅನುದಾನ ಬಂದಿದೆ. ವರ್ಷದಿಂದ ವರ್ಷಕ್ಕೆ ಈ ಅನುದಾನ ಹೆಚ್ಚಳವಾಗುತ್ತಿದೆ. ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್‌ ಪರಿಣತಿ ಪಡೆದಿರುವ ವಿಶೇಷ ಪಕ್ಷವಾಗಿದೆ’ ಎಂದು ಜೋಶಿ ಲೇವಡಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT