ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಪಕ್ಷದ ಗೂಂಡಾಗಳು ಸಕ್ರಿಯ: ಬಿಜೆಪಿ ಆರೋಪ

Published 11 ಏಪ್ರಿಲ್ 2024, 4:47 IST
Last Updated 11 ಏಪ್ರಿಲ್ 2024, 4:47 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಪಕ್ಷದ ಗೂಂಡಾಗಳು ಸಕ್ರಿಯಗೊಂಡಿದ್ದು ಅಲ್ಲದೆ, ಅವರನ್ನು ಮಜಾವಾದಿ ಸಿದ್ದರಾಮಯ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು, ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ‌ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾ ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ, ಸಣ್ಣ ಕೇಸ್ ಹಾಕಿ ರಾಜಾರೋಷವಾಗಿ ಬೀದಿಗೆ ಬಿಟ್ಟಿದೆ ಎಂದು ಕಿಡಿಕಾರಿದೆ.

‘ಆ ದಿನಗಳಂತೆ ಚುನಾವಣೆ ಗೆಲ್ಲಲು ಗೂಂಡಾಗಿರಿ ಮಾಡುತ್ತಿರುವ ಅಣ್ಣ- ತಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಮುಂದುವರಿದ ಭಾಗವೇ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಮತದಾರರನ್ನು ಬೆದರಿಸುವ ಕೆಲಸ ಮಾಡಲಾಗುತ್ತಿದೆ. ಕೂಡಲೇ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಂಡು ನಿಷ್ಪಕ್ಷಪಾತವಾಗಿ ರಾಜ್ಯದಲ್ಲಿ ಚುನಾವಣೆ ನಡೆಯಲು ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ ತುಂಬಬೇಕಿದೆ‘ ಎಂದು ಪೋಸ್ಟ್‌ನಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT