ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಬಿಜೆಪಿಯ ಕೆಲವರಿಂದ ಅಸಹಕಾರ: ದೇವೇಗೌಡ

Published 24 ಏಪ್ರಿಲ್ 2024, 21:28 IST
Last Updated 24 ಏಪ್ರಿಲ್ 2024, 21:28 IST
ಅಕ್ಷರ ಗಾತ್ರ

ಹಾಸನ: ‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಕೆಲವರು ಸಹಕರಿಸುತ್ತಿಲ್ಲ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ದೂರಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಹಾಸನದಲ್ಲಿ ಬಿಜೆಪಿಯ ಒಬ್ಬರು ವಿರೋಧಿಸುತ್ತಾರೆ ಎಂದು ನೀವು ಕೇಳಬಹುದು. ಮಂಡ್ಯದಲ್ಲಿ ಸುಮಲತಾ ಸಹಕರಿಸುತ್ತಿಲ್ಲ. ಇದರಿಂದ ಅಪಾಯವೇನೂ ಆಗುವುದಿಲ್ಲ. ಕಾವೇರಿ ಜಲಾನಯನ ಪ್ರದೇಶದ ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಎಲ್ಲೆಡೆಯೂ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ’ ಎಂದರು.

‘ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪ್ರಧಾನಿ ಗಮನಕ್ಕೆ ತಂದಿದ್ದೇನೆ. ಮೇಕೆದಾಟು ಅಣೆಕಟ್ಟೆ ನಿರ್ಮಾಣ ಸಂಬಂಧ ಕೇಂದ್ರ ಜಲ ಸಂಪನ್ಮೂಲ ಸಚಿವರ ಜೊತೆಗೂ ಮಾತನಾಡಿದ್ದೇನೆ. ಪ್ರಧಾನಿ ಮೋದಿಯವರಿಗೆ ಡಿಎಂಕೆ ಹಂಗಿನಲ್ಲಿ ಅಧಿಕಾರ ನಡೆಸುವ ಪರಿಸ್ಥಿತಿ ಇಲ್ಲ. ಈ ಬಾರಿ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ’ ಎಂದರು.  

‘ದೇಶದ ಸಂಪತ್ತನ್ನು ಸಮಾನವಾಗಿ ಹಂಚುತ್ತೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಆದರೆ ಅವರಿಗೆ ಅಧಿಕಾರಕ್ಕೆ ಬರುವ ಶಕ್ತಿಯೇ ಇಲ್ಲ. ‌ಮನಸ್ಸಿಗೆ ಬಂದಂತೆ ಮಾತಾಡುತ್ತಾರೆ. ದೇಶದ ಭೂಮಿ, ಸಂಪತ್ತನ್ನು ಹಂಚುತ್ತೇವೆ ಎಂದು ಪಕ್ಷದ ಮುಖಂಡ ರಾಹುಲ್ ಗಾಂಧಿ ಹೇಳುತ್ತಾರೆ. ಇಂತಹ ಹೇಳಿಕೆ ಎಷ್ಟು ಸರಿ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT