ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಭಿಮಾನಕ್ಕೆ ಕಾಂಗ್ರೆಸ್‌ ಪೆಟ್ಟು: ಪಕ್ಷೇತರವಾಗಿ ಸ್ಪರ್ಧಿಸಲು ದತ್ತ ನಿರ್ಧಾರ

Last Updated 9 ಏಪ್ರಿಲ್ 2023, 12:42 IST
ಅಕ್ಷರ ಗಾತ್ರ

ಕಡೂರು: ‘ಕಾಂಗ್ರೆಸ್‌ ಟಿಕೆಟ್‌ ನೀಡದೆ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ, ಈ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಕಡೂರು ಕ್ಷೇತ್ರದ ಸ್ವಾಭಿಮಾನವನ್ನು ರಾಜ್ಯಕ್ಕೆ ತೋರಿಸುವ ಛಲ ತೊಟ್ಟಿದ್ದೇನೆ’ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಪ್ರಕಟಿಸಿದರು.

ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿತ್ತು. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ ಎಂಬುದಕ್ಕೆ ಪೂರಕವಾಗಿ 50 ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅದನ್ನು, ನನ್ನ ಅಭಿಮಾನಿಗಳು ಮತ್ತು ಪ್ರೀತಿಸುವ ಸಮುದಾಯಗಳು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿವೆ. ಆ ಸ್ವಾಭಿಮಾನ ಉಳಿಸಿಕೊಳ್ಳಲು ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ’ ಎಂದು ಹೇಳಿದರು.

‘ಪ್ರೀತಿಯಿಂದಲೇ ಜನರ ಬಳಿ ತೆರಳಿ ಹಣ ಸಹಾಯದ ಜೊತೆ ಮತ ಭಿಕ್ಷೆ ಬೇಡುತ್ತೇನೆ‌. ಸ್ವಾಭಿಮಾನ ಎಂದರೆ ಏನು ಎಂಬುದನ್ನ ನನ್ನ ಅಭಿಮಾನಿಗಳು ಇಡೀ ರಾಜ್ಯಕ್ಕೆ ತೋರಿಸುತ್ತಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ’ ಎಂದರು.

‘ಈಗ ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಮಾನದಂಡದ ಅವಲೋಕನ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ, ಅದನ್ನು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT