ಬೆಂಗಳೂರು: ಕರ್ನಾಟಕ ವಿಧಾನಸಭೆಯ ಚುನಾವಣೆ ಫಲಿತಾಂಶ ಇಂದು (ಮೇ.13) ಪ್ರಕಟಗೊಂಡಿದೆ. ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದತ್ತ ಹೆಜ್ಜೆ ಇಟ್ಟಿದ್ದು, ಆಡಳಿತ ಪಕ್ಷ ಬಿಜೆಪಿ ಭಾರಿ ಮುಖಭಂಗ ಅನುಭವಿಸಿದೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಕಾಂಗ್ರೆಸ್ ಸದ್ಯ 107 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನೂ 29 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಬಹುಮತ ಸಾಧಿಸುವ ವಿಶ್ವಾಸದಲ್ಲಿದೆ. ಬಿಜೆಪಿ 50 ಸ್ಥಾನಗಳಲ್ಲಿ ಜಯ ಕಂಡಿದ್ದು, 14 ಕಡೆ ಮುನ್ನಡೆ ಕಾಯ್ದುಕೊಂಡಿದೆ. 16 ಸ್ಥಾನ ಗೆದ್ದಿರುವ ಜೆಡಿಎಸ್, ನಾಲ್ಕು ಕಡೆ ಮುನ್ನಡೆಯಲ್ಲಿದೆ. 4 ಸ್ಥಾನಗಳು ಇತರರ ಪಾಲಾಗಿವೆ.

ಚುನಾವಣೆ ಗೆಲುವಿನ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕರು ಇಂದು ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

Karnataka Election Results 2023 Live

ನಾಳೆ (ಮೇ.14) ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಆಯ್ಕೆ ಬಗ್ಗೆಯೂ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಸೋಮವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

224 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.