ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರತ್ಕಲ್‌ನಲ್ಲಿ ಕಾಂಗ್ರೆಸ್‌ ಪಾದಯಾತ್ರೆಯಲ್ಲಿ

Published 23 ಏಪ್ರಿಲ್ 2024, 15:27 IST
Last Updated 23 ಏಪ್ರಿಲ್ 2024, 15:27 IST
ಅಕ್ಷರ ಗಾತ್ರ

ಸುರತ್ಕಲ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಪದ್ಮರಾಜ್ ಆರ್‌. ಪರ ರೋಡ್ ಶೋ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಹೊಸಬೆಟ್ಟುವಿನಿಂದ ಬೈಕಂಪಾಡಿ ಎಪಿಎಂಸಿ ವರೆಗೆ ನಡೆಯಿತು.

ಬೈಕಂಪಾಡಿ ಜಂಕ್ಷನ್‌ನಲ್ಲಿ ಹೂವಿನ ಬೃಹತ್‌ ಹಾರವನ್ನು ಕಾರ್ಯಕರ್ತರು ಇನಾಯತ್ ಅಲಿ ಮತ್ತು ಅಭ್ಯರ್ಥಿ ಪದ್ಮರಾಜ್ ಅವರಿಗೆ ಹಾಕಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಇನಾಯತ್ ಅಲಿ, ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರಿಗೆ ಅಭಿವೃದ್ಧಿಯ ಆಡಳಿತ ನೀಡಿಲ್ಲ. ಬದಲಿಗೆ ಪ್ರಧಾನಿ ಮೋದಿ ಸುಳ್ಳುಗಳ ಮೇಲೆ ಸುಳ್ಳನ್ನು ಹೇಳಿರುವುದೇ ಅವರ ಬಲುದೊಡ್ಡ ಸಾಧನೆ. ಈ ಬಾರಿ ಕಾಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರನ್ನು ಗೆಲ್ಲಿಸಬೇಕು’ ಎಂದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಪಕ್ಷದ ಅಭ್ಯರ್ಥಿ ಪದ್ಮರಾಜ್ ಮಾತನಾಡಿದರು.

ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ, ಪೃಥ್ವಿರಾಜ್, ಗಿರೀಶ್ ಆಳ್ವ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ಚಿತ್ರಾಪುರ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ಯು.ಪಿ.ಇಬ್ರಾಹಿಂ, ಎಂ.ಜಿ.ಹೆಗಡೆ ಭಾಗವಹಿಸಿದ್ದರು.

ಬೈಕಂಪಾಡಿ ಎಪಿಎಂಸಿ ಬಳಿ ನಡೆದ ಬಹಿರಂಗ ಸಭೆಯಲ್ಲಿ ಬಿಜೆಪಿ ವಿರುದ್ಧ ಚೊಂಬು ಪ್ರದರ್ಶಿಸಿದರು
ಬೈಕಂಪಾಡಿ ಎಪಿಎಂಸಿ ಬಳಿ ನಡೆದ ಬಹಿರಂಗ ಸಭೆಯಲ್ಲಿ ಬಿಜೆಪಿ ವಿರುದ್ಧ ಚೊಂಬು ಪ್ರದರ್ಶಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT