ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್‌ರನ್ನು ತಕ್ಷಣ ಬಂಧಿಸಿ, ಗಲ್ಲಿಗೇರಿಸಿ: ಕಾಂಗ್ರೆಸ್‌ ಪ್ರತಿಭಟನೆ

Published 28 ಏಪ್ರಿಲ್ 2024, 15:58 IST
Last Updated 28 ಏಪ್ರಿಲ್ 2024, 15:58 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂಸದ ಪ್ರಜ್ವಲ್ ರೇವಣ್ಣ ಅವರು ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಕೀಳುಮಟ್ಟದಿಂದ ಅವಮಾನಿಸಿದ್ದಾರೆ’ ಎಂದು ಆರೋಪಿಸಿರುವ ಕಾಂಗ್ರೆಸ್‌ ಕಾರ್ಯಕರ್ತರು, ಪ್ರಜ್ವಲ್ ಅವರನ್ನು ತಕ್ಷಣ ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು

‘ಪ್ರಜ್ವಲ್‌ ರೇವಣ್ಣ ಹೆಣ್ಣು ಮಕ್ಕಳನ್ನು ಅವಮಾನಿಸಿ, ಹಿಂಸಿಸಿ, ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದರೂ ಮೌನಕ್ಕೆ ಶರಣಾಗಿರುವ ಬಿಜೆಪಿ ರಾಜ್ಯ, ರಾಷ್ಟ್ರ ನಾಯಕರು ಮಹಿಳೆಯರ ಕ್ಷಮೆಕೋರಬೇಕು’ ಎಂದು ಆಗ್ರಹಪಡಿಸಿದರು.

ಪ್ರಜ್ವಲ್‌ ರೇವಣ್ಣನನ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ‘ಮಹಿಳೆಯರನ್ನು ತಾಯಿ ಎಂದು ಸಂಬೋಧಿಸುವ ದೇವೇಗೌಡರು, ಕುಮಾರಸ್ವಾಮಿಯವರು ಇಂತಹ ಕಿಡಿಗೇಡಿಯ ಕೃತ್ಯವನ್ನು ಯಾಕೆ ಖಂಡಿಸುತ್ತಿಲ್ಲ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ’ ಎಂದೂ ಟೀಕಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಮುಖಂಡರಾದ ಆನಂದ್ ಪ್ರಕಾಶ್, ಹೇಮರಾಜು, ಮಹಿಳಾ ಕಾಂಗ್ರೆಸ್ ಮುಖಂಡರಾದ ಉಮಾಬಾಯಿ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT