ಮೈಸೂರು: ‘ನಾನು ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ’ ಎಂದು ಮೈಸೂರು –ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ನಗರದ ಕನ್ನೇಗೌಡನಕೊಪ್ಪಲಿನ ವಿವಿಧ ರಸ್ತೆಗಳಲ್ಲಿ ಜೆಡಿಎಸ್ ಮುಖಂಡರೊಂದಿಗೆ ಶನಿವಾರ ತೆರೆದ ವಾಹನದಲ್ಲಿ ಸಂಚರಿಸಿ ಮತ ಯಾಚಿಸಿದರು.

‘ನನ್ನನ್ನು ಗೆಲ್ಲಿಸುವ ಮೂಲಕ ಮೋದಿ ಅವರಿಗೆ ಶಕ್ತಿ ತುಂಬಬೇಕು. ಮೈಸೂರು ಮತ್ತು ಕೊಡಗು ಜಿಲ್ಲೆಗಳನ್ನು ಇನ್ನಷ್ಟು ನೆಚ್ಚಿನ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುತ್ತೇನೆ. ಈ ಭಾಗದ ಜನರ ಕಷ್ಟ– ಸುಖಗಳಿಗೆ ಸ್ಪಂದಿಸುತ್ತೇನೆ. ನನ್ನ ಕಚೇರಿ ಸದಾ ಅರಮನೆಯಿಂದ ಹೊರಗೆ ಇರುತ್ತದೆ. ಅದು ನನ್ನ ಕಚೇರಿ ಆಗಿರುವುದಿಲ್ಲ. ಕಾರ್ಯಕರ್ತರ ಕಚೇರಿ ಆಗಿರುತ್ತದೆ. ಸರ್ವರಿಗೂ ಮುಕ್ತವಾದ ಸ್ವಾಗತವಿರಲಿದೆ’ ಎಂದರು.

‘ದೇಶದ ಸಮಗ್ರ ಅಭಿವೃದ್ಧಿಗೆ ಮೋದಿ ಶ್ರಮಿಸುತ್ತಿದ್ದಾರೆ. ಮೈಸೂರಿನಿಂದಲೂ ಅವರಿಗೆ ಶಕ್ತಿ ತುಂಬಬೇಕು’ ಎಂದು ಕೋರಿದರು.

ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ, ಮುಖಂಡರಾದ ಕೆಂಪಣ್ಣ, ಶಂಕರ್, ಎಂ.ಶಿವಕುಮಾರ್ ಪಾಲ್ಗೊಂಡಿದ್ದರು.

ನಂತರ ಯದುವೀರ್, ನಗರದ ವಿವಿಧೆಡೆ ರೋಡ್ ಶೋ ನಡೆಸಿ ಸಾರ್ವಜನಿಕರಿಂದ ಮತ ಯಾಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.