ಬೆಂಗಳೂರು: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೋಗಿ, ಬಿಜೆಪಿ–ಜೆಡಿಎಸ್ ಸರ್ಕಾರ ಬರಬೇಕು. ಮುಖ್ಯಮಂತ್ರಿ ಯಾರಾದರೂ ಆಗಲಿ, ಅದು ಆಮೇಲೆ. ಅವರಿಂದ ನಿಮ್ಮ ಕೆಲಸ ಮಾಡಿಸುತ್ತೇನೆ. ಅದು ನನ್ನ ಬದ್ಧತೆ’ ಎಂದು ಎಚ್.ಡಿ. ದೇವೇಗೌಡ ಹಾಸನದಲ್ಲಿ ಹೇಳಿದರು.

‘ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ಅವರನ್ನು ಬಿಟ್ಟರೆ ಬೇರೆ ನಾಯಕರು ಯಾರಿದ್ದಾರೆ? ಭಾರತದ ಆರ್ಥಿಕ ಶಕ್ತಿ ಐದರಿಂದ ಮೂರನೇ ಸ್ಥಾನಕ್ಕೆ ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಹೆಸರು ಹೇಳಿದರೆ, ಸಿದ್ದರಾಮಯ್ಯ ವಿರೋಧಿಸುತ್ತಾರೆ. ಮಮತಾ ಬ್ಯಾನರ್ಜಿಯವರೂ ವಿರೋಧಿಸುತ್ತಾರೆ’ ಎಂದರು.

‘ಬೆಂಗಳೂರಿನಲ್ಲಿ ಶೋಭಾ ಕರಂದ್ಲಾಜೆ, ತುಮಕೂರಿನಲ್ಲಿ ವಿ.ಸೋಮಣ್ಣ, ಚಿಕ್ಕಮಗಳೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಹೀಗೆ... ಎಲ್ಲೆಲ್ಲಿ ನಾನು ಹೋಗಬೇಕು ಎನ್ನುತ್ತಾರೋ ಅಲ್ಲಿಗೆ ಪ್ರಚಾರಕ್ಕೆ ಹೋಗುತ್ತೇನೆ. 28 ಕ್ಷೇತ್ರಗಳಲ್ಲೂ ಹೋರಾಟ ಮಾಡುತ್ತೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.