ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ| ಚುನಾವಣೆಯಲ್ಲಿ ಸ್ಪರ್ಧಿಸಲು ಒತ್ತಡ, ಶೀಘ್ರ ನಿರ್ಧಾರ –ದಿಂಗಾಲೇಶ್ವರ ಶ್ರೀ

Published 2 ಏಪ್ರಿಲ್ 2024, 9:55 IST
Last Updated 2 ಏಪ್ರಿಲ್ 2024, 9:55 IST
ಅಕ್ಷರ ಗಾತ್ರ

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುವಂತೆ ಭಕ್ತರು ಒತ್ತಾಯಿಸಿದ್ದು, ಶೀಘ್ರದಲ್ಲಿ ನಿರ್ಧಾರ ತಿಳಿಸುತ್ತೇನೆ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಠದ ಗುರುಗಳು, ಪ್ರಮುಖರ ಅಭಿಪ್ರಾಯ ಪಡೆಯುತ್ತೇನೆ. ಬೆಂಗಳೂರಿನಲ್ಲಿ ನಿರ್ಧಾರ ಪ್ರಕಟಿಸುತ್ತೇನೆ ಎಂದರು.

ಪ್ರಲ್ಹಾದ ಜೋಶಿ ಅವರಿಗರ ಧಾರವಾಡ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಿಸಿರುವುದನ್ನು ಬದಲಾವಣೆ ಮಾಡಬೇಕು ಎಂದು ಕೇಳಿದ್ದೆ. ಅವರನ್ನು ಬದಲಾವಣೆ ಮಾಡುವುದಿಲ್ಲ ಎಂದು ಪಕ್ಷದವರು ಹೇಳಿದ್ದಾರೆ. ಹೀಗಾಗಿ, ಹೋರಾಟಕ್ಕೆ ಮುಂದಾಗಿದ್ದೇನೆ. ಮುಂದಿಟ್ಟ ಹೆಜ್ಜೆ ಹಿಂದಿಡಬೇಡಿ ಎಂದು ಭಕ್ತರು ಸಲಹೆ ನೀಡಿದ್ದಾರೆ ಎಂದರು.

ಹೋರಾಟ ಕೈಬಿಡಲ್ಲ, ಒತ್ತಡಕ್ಕೆ ಮಣಿಯಲ್ಲ, ಆಮಿಷಕ್ಕೆ ಬಗ್ಗಲ್ಲ. ನಮ್ಮ ಹೋರಾಟ ಬಿಜೆಪಿ ವಿರುದ್ಧ ಅಲ್ಲ. ಇದು ಜೋಶಿ ಅವರ ವ್ಯಕ್ತಿತ್ವ, ನಡೆ-ನುಡಿ ವಿರುದ್ಧದ ಹೋರಾಟ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT