ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯಲ್ಲೇ ಕುಳಿತುಕೊಳ್ಳಬೇಡಿ, ಮತಗಟ್ಟೆಗೆ ಬನ್ನಿ ಹಕ್ಕು ಚಲಾಯಿಸಿ: ಸುಧಾಮೂರ್ತಿ

Published 26 ಏಪ್ರಿಲ್ 2024, 3:05 IST
Last Updated 26 ಏಪ್ರಿಲ್ 2024, 3:05 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ.

ಇನ್ಫೊಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಹಾಗೂ ರಾಜ್ಯಸಭಾ ಸದಸ್ಯೆ, ಲೇಖಕಿ ಸುಧಾಮೂರ್ತಿ ಅವರು ಬೆಂಗಳೂರಿನ ಬಿಇಎಸ್ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಮೂರ್ತಿ, ‘ನಾನು ಎಲ್ಲರಿಗೂ ಹೇಳಲು ಬಯಸುವುದೆನೆಂದರೆ ಅರ್ಹ ಮತದಾರರೆಲ್ಲರೂ ಮನೆಯಲ್ಲೇ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತ ಚಲಾಯಿಸಿ. ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ಆಯ್ಕೆ ಮಾಡಿ’ ಎಂದು ಮನವಿ ಮಾಡಿದ್ದಾರೆ.

‘ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರವಾಸಿಗಳು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ’ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ನಾರಾಯಣ ಮೂರ್ತಿ, ‘ಪ್ರತಿ ಐದು ವರ್ಷಗಳಿಗೊಮ್ಮೆ ನಮ್ಮ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸುವ ಅವಕಾಶವೇ ಮತದಾನ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಇದು ಸುಸಂದರ್ಭ. ಇಂದು ಬಹಳ ಸಂತೋಷದ ದಿನ. ನಾವೆಲ್ಲರೂ ನಮ್ಮ ಹಕ್ಕನ್ನು ಚಲಾಯಿಸಲು ಉತ್ಸಾಹದಿಂದ ಇರಬೇಕಾದ ದಿನ’ ಎಂದು ತಿಳಿಸಿದ್ದದಾರೆ.

ರಾಜ್ಯಸಭೆಯ ನಾಮ ನಿರ್ದೇಶಿತ ಸದಸ್ಯೆಯಾಗಿ ಲೇಖಕಿ ಸುಧಾಮೂರ್ತಿ ಅವರು ಮಾರ್ಚ್‌ 14ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಇನ್ಫೋಸಿಸ್‌ ಪ್ರತಿಷ್ಠಾನದ ಮಾಜಿ ಅಧ್ಯಕ್ಷೆಯಾಗಿರುವ ಸುಧಾಮೂರ್ತಿ ಅವರನ್ನು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT