ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ವಿಠಲಾಪೂರ ಗ್ರಾಮದಲ್ಲಿ ಮಂಗಳವಾರ ಗ್ರಾಮಸ್ಥರುಲೋಕಸಭಾ ಚುನಾವಣೆಯ ಮತದಾನ ಮಾಡದೆ ದೂರು ಉಳಿದಿದ್ದಾರೆ. ತಾವರಗೇರಾ ಪಟ್ಟಣ ಪಂಚಾಯಿತಿ 18ನೇ ವಾರ್ಡ್ ವ್ಯಾಪ್ತಿಗೆ ಬರುವ ವಿಠಲಾಪೂರ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 142ರಲ್ಲಿ 862 ಮತದಾರರಿದ್ದಾರೆ.ಕಳೆದ ಕೆಲವು ದಿನಗಳ ಹಿಂದೆ ಗ್ರಾಮದ ಗರ್ಭಿಣಿಯೊಬ್ಬರು ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಇದಕ್ಕೆ ವೈದ್ಯ ಕಾವೇರಿ ಶ್ಯಾವಿ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.