ಹಾಸನ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದ ನಂತರ ಜೆಡಿಎಸ್ ಪಾಳಯದಲ್ಲಿ ಉತ್ಸಾಹ ಹೆಚ್ಚಾಗಿದೆ. ಇದೀಗ ಪ್ರಜ್ವಲ್ ರೇವಣ್ಣ ಪರ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ತಮ್ಮ ಕುಟುಂಬದ ಸಂಪ್ರದಾಯದಂತೆ ಹೊಳೆನರಸೀಪುರ ತಾಲ್ಲೂಕಿನ ಮೂಡಲಹಿಪ್ಪೆ ಗ್ರಾಮದಲ್ಲಿ ಶುಕ್ರವಾರ ರಂಗನಾಥ ಸ್ವಾಮಿಗೆ ಪೂಜೆ ಸಲ್ಲಿಸಿದ ಎಚ್.ಡಿ. ರೇವಣ್ಣ, ಭವಾನಿ ಹಾಗೂ ಪ್ರಜ್ವಲ್ ಪ್ರಚಾರ ಆರಂಭಿಸಿದರು.

ಇತ್ತ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಚ್.ಡಿ.ರೇವಣ್ಣ, ’ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ. ಪ್ರಜ್ವಲ್ ಪರ ಪ್ರಚಾರಕ್ಕೆ ಬರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲೂ ಹಾಜರಿರುವುದಾಗಿ ಭರವಸೆ ನೀಡಿದ್ದಾರೆ’ ಎಂದರು.

‘ಎಲ್ಲ ಅಸಮಾಧಾನಿತರ ಜೊತೆಗೆ ಮಾತನಾಡುತ್ತೇನೆ. ಒಳ್ಳೆಯ ದಿನ ನೋಡಿ ಪ್ರಚಾರ ಆರಂಭಿಸಿದ್ದೇವೆ. ಎಲ್ಲವೂ ಸರಿಯಾಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.