ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Exit Polls 2024 | ‘ಕೈ’ ಜಿಗಿದರೂ ರಾಜ್ಯದಲ್ಲಿ ‘ಕಮಲ’ದ ಪ್ರಾಬಲ್ಯ

Published 1 ಜೂನ್ 2024, 23:04 IST
Last Updated 1 ಜೂನ್ 2024, 23:04 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಹಿಂದಿಗಿಂತ ಹೆಚ್ಚು ಸ್ಥಾನ ಗಳಿಸಿದರೂ ಬಿಜೆಪಿಯ ಪ್ರಾಬಲ್ಯ ಮುಂದುವರಿಯಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25, ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಪಕ್ಷೇತರರಿಗೆ ತಲಾ ಒಂದು ಸ್ಥಾನ ದಕ್ಕಿತ್ತು. ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಮೂರರಿಂದ ಎಂಟು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ವಿವಿಧ ಸಂಸ್ಥೆಗಳು ನಡೆಸಿರುವ ಮತದಾನೋತ್ತರ ಸಮೀಕ್ಷೆಗಳು ಹೇಳಿವೆ.

ಕಾಂಗ್ರೆಸ್‌ ಮೂರರಿಂದ ಎಂಟು ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಕಳೆದ ಚುನಾವಣೆಗೆ ಹೋಲಿಸಿದರೆ ಎರಡರಿಂದ ಏಳು ಸ್ಥಾನಗಳನ್ನು ಹೆಚ್ಚುವರಿಯಾಗಿ ಗಳಿಸಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ.

ಕಳೆದ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಒಂದ ರಿಂದ 7 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಮತಗಟ್ಟೆ ಸಮೀಕ್ಷೆಗಳು ಅಂದಾಜು ಮಾಡಿವೆ. ಬಿಜೆಪಿ 18ರಿಂದ 24 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ಉಲ್ಲೇಖಿಸಿವೆ.

ಜೆಡಿಎಸ್‌ ಹಾಲಿ ಒಂದು ಸ್ಥಾನ ಹೊಂದಿದೆ. ಈ ಚುನಾ ವಣೆಯಲ್ಲಿ ಮೂರು ಕ್ಷೇತ್ರ ಗಳಲ್ಲಿ ಸ್ಪರ್ಧಿಸಿದೆ. ಎರಡರಿಂದ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

25ಕ್ಕಿಂತ ಹೆಚ್ಚು ಕ್ಷೇತ್ರ ಗಳಲ್ಲಿ ಗೆಲುವು ಸಾಧಿಸುವುದಾಗಿ ಬಿಜೆಪಿ ಹೇಳಿಕೊಂಡಿದೆ. 17ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವುದಾಗಿ ಕಾಂಗ್ರೆಸ್‌ ಹೇಳುತ್ತಿದೆ. ಎರಡೂ ಪಕ್ಷಗಳ ಪ್ರತಿಪಾದನೆಗೆ ಭಿನ್ನವಾದ ಅಭಿಪ್ರಾಯ ಮತಗಟ್ಟೆ ಸಮೀಕ್ಷೆ ಗಳಲ್ಲಿ ಹೊರಬಿದ್ದಿದೆ.

ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ.
ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT