ಹಾವೇರಿ: ‘ಕೇಂದ್ರ ಸರ್ಕಾರ ನೀಡಿದ ಬರ ಪರಿಹಾರದಲ್ಲಿ ರಾಜ್ಯ ಸರ್ಕಾರ ₹2 ಸಾವಿರ ಕಡಿತ ಮಾಡಿ ರೈತರಿಗೆ ನೀಡುತ್ತಿದೆ. ಬರ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿ ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಹಾವೇರಿಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ರೈತರು ಸಂಕಷ್ಟದಲ್ಲಿ ಇದ್ದಾರೆ ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡಿದೆ. ಅದನ್ನು ರಾಜ್ಯ ಸರ್ಕಾರ ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಅದು ಹೇಗೆ ಪರಿಹಾರವಾಗುತ್ತದೆ. ಇದನ್ನು ಕೂಡಲೇ ಸರಿಪಡಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರಕ್ಕೆ ರೈತರಿಗೆ ಸಹಾಯ ಮಾಡುವ ಮನಸ್ಸಿದ್ದರೆ, ಕಾಂಗ್ರೆಸ್ ಚುನಾವಣಾ ಘೋಷಣಾ ಪತ್ರದಲ್ಲಿ ಹೇಳಿರುವಂತೆ ರೈತರ ಸಾಲ ಮನ್ನಾ ಮಾಡಲಿ, ಕಾಂಗ್ರೆಸ್ ಘೋಷಣಾ ಪತ್ರ ಕರ್ನಾಟಕದಿಂದ ಪ್ರಾರಂಭವಾಗಲಿ ಎಂದು ಆಗ್ರಹಿಸಿದರು.

ಕೊಲೆಗಡುಕರನ್ನು ಗಲ್ಲಿಗೇರಿಸಲಿ:

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಮತ್ತೊಂದು ಸಾಕ್ಷಿ. ಇಂತಹ ಹೇಯ ಕೃತ್ಯ ಯಾರೇ ಮಾಡಿರಲಿ ಅವರನ್ನು ತಂದು ಗಲ್ಲಿಗೇರಿಸಿ. ಹಾಡಹಗಲೇ ಇಂತಹ ಘೋರ ಕೃತ್ಯ ನಡೆದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಜಾತಿನಿಂದನೆ ಪ್ರಕರಣ ದಾಖಲಿಸುವುದು, ಕ್ಲಬ್ ನಡೆಸುವುದರಲ್ಲಿ ಮಗ್ನರಾಗಿದ್ದಾರೆ. ಈ ರೀತಿಯಲ್ಲಿ ಕೊಲೆ, ಅತ್ಯಾಚಾರಗಳು ನಡೆಯುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ರಾಜ್ಯ ಸರ್ಕಾರವೇ ಮುಂದೆ ನಿಂತು ಕುಮ್ಮಕ್ಕು ನೀಡುವುದನ್ನು ನಾನು ಇತಿಹಾಸದಲ್ಲಿ ನೋಡಿರಲಿಲ್ಲ. ಇದೊಂದು ಜನವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.