ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯಗೆ ಕುರ್ಚಿ ಕಳೆದುಕೊಳ್ಳುವ ಭೀತಿ: ಬೊಮ್ಮಾಯಿ

Published 3 ಮೇ 2024, 19:21 IST
Last Updated 3 ಮೇ 2024, 19:21 IST
ಅಕ್ಷರ ಗಾತ್ರ

ಗದಗ: ‘ಲೋಕಸಭೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ಬಾರದಿದ್ದರೆ ತಮ್ಮ ಕುರ್ಚಿ ಹೋಗುತ್ತದೆ ಎಂಬ ಆತಂಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಡುತ್ತಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಗ್ಯಾರಂಟಿಗಳಿಂದ ಬಿಜೆಪಿಗೆ ಬುಡ ಅಲ್ಲಾಡುತ್ತಿದೆ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನಗರದಲ್ಲಿ ತಿರುಗೇಟು ನೀಡಿದ ಅವರು, ‘ಚುನಾವಣೆಯಲ್ಲಿ ಹೆಚ್ಚಿನ ಮತ ಸಿಗದಿದ್ದರೆ, ಮುಂದುವರಿಕೆ ಕಷ್ಟ ಎಂಬುದನ್ನು ಸ್ವತಃ ಅವರೇ ಒಪ್ಪಿದ್ದಾರೆ. ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದಾರೆ’ ಎಂದರು.

‘ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಮುಜುಗರ ತಪ್ಪಿಸಲು ಮೋದಿ ಅವರು ರಾಜ್ಯ ಪ್ರವಾಸ ರದ್ದು ಮಾಡಿದ್ದಾರೆ’ ಎಂಬ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸಿದ ಅವರು,‘ಮೋದಿ ಅವರು ರಾಜ್ಯದಲ್ಲಿ ಎರಡು ದಿನ ಪ್ರವಾಸ ಮಾಡಿದ್ದಾರೆ. ಪ್ರಜ್ವಲ್ ಪ್ರಕರಣ ಆದ ಮೇಲೆಯೇ ಎರಡು ದಿನ ಬಂದು ಹೋಗಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT