ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಬಿಜೆಪಿಗೆ ಸೇರ್ಪಡೆಯಾದ ಅಖಂಡ ಶ್ರೀನಿವಾಸಮೂರ್ತಿ

Published 17 ಏಪ್ರಿಲ್ 2024, 15:53 IST
Last Updated 17 ಏಪ್ರಿಲ್ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬುಧವಾರ ಬಿಜೆಪಿ ಸೇರಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ನಿರಾಕರಿಸಿದ್ದರಿಂದ ಅವರು ಬಿಎಸ್‌ಪಿಯಿಂದ ಸ್ಪರ್ಧಿಸಿ ಸೋತಿದ್ದರು.

ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್‌.ಯಡಿಯೂರಪ್ಪ, ‘ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯ ಸಂದರ್ಭದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಇಟ್ಟು ಸುಟ್ಟು ಹಾಕಿದಾಗ ಕಾಂಗ್ರೆಸ್‌ ಪಕ್ಷದ ಯಾವುದೇ ನಾಯಕರು ಇವರ ನೆರವಿಗೆ ಬರಲಿಲ್ಲ. ಬೆಂಬಲ ವ್ಯಕ್ತಪಡಿಸದೇ ನಾಯಕರು ಮೌನವಾಗಿದ್ದರು. ನಾವು ಅವರ ಬೆಂಬಲಕ್ಕೆ ನಿಂತೆವು. ಈಗ ಅವರು ತಮ್ಮ ಬೆಂಬಲಿಗರೊಂದಿಗೆ ಪಕ್ಷವನ್ನು ಸೇರಿದ್ದಾರೆ. ಇದರಿಂದ ಪಕ್ಷದ ಶಕ್ತಿ ಹೆಚ್ಚಾಗಿದ್ದು, ಶೋಭಾ ಅವರು ಎರಡೂವರೆ ಲಕ್ಷ ಅಂತರದಿಂದ ಗೆಲ್ಲುವುದು ನಿಶ್ಚಿತ’ ಎಂದು ಹೇಳಿದರು.

ಅಖಂಡ ಶ್ರೀನಿವಾಸಮೂರ್ತಿ ಮಾತನಾಡಿ, ‘2018 ರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಗೆದ್ದಿದ್ದೆ. ಆದರೆ, 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ತಪ್ಪಿಸಿತು. ಡಿ.ಜೆ.ಹಳ್ಳಿ ಗಲಭೆ ವೇಳೆ ನನ್ನದಲ್ಲದ ತಪ್ಪಿಗೆ ನನ್ನ ಮನೆ ಸುಟ್ಟು ಹಾಕಿದರು. ಆಗ ಕಾಂಗ್ರೆಸ್‌ ನಾಯಕರು ಬೆಂಬಲಕ್ಕೆ ನಿಲ್ಲಲಿಲ್ಲ. ಇವತ್ತು ಶ್ರೀರಾಮನವಮಿ, ಈ ಶುಭದಿನದಂದು ನನಗೆ ಬಿಜೆಪಿ ಸೇರಲು ಅವಕಾಶ ನೀಡಿದೆ. ಬಿಜೆಪಿ ಸೇರಲು ಶ್ರೀರಾಮನ ಆಶೀರ್ವಾದವೇ ಕಾರಣ’ ಎಂದು ಹೇಳಿದರು.

‘ನನ್ನ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತರು ಒಗ್ಗಟ್ಟಾಗಿದ್ದೇವೆ. ನನ್ನ ಮನೆಗೆ ಬೆಂಕಿ ಹಚ್ಚಿದವರು ಈಗಲೂ ಹೊರಗಡೆ ಓಡಾಡಿಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಪದವಿಗಳನ್ನೂ ಪಡೆದುಕೊಂಡಿದ್ದಾರೆ. ಅಮಾಯಕರು ಜೈಲಿನಲ್ಲಿದ್ದರೆ ಅದಕ್ಕೆ ನಾನು ಕಾರಣನಲ್ಲ. ಕಾಂಗ್ರೆಸ್‌ನಲ್ಲಿ ಟಿಕೆಟ್‌ ತಪ್ಪಿಸಿದ್ದು ಒಳ್ಳೆಯದೇ ಆಯಿತು. ಇದರಿಂದ ನಾನು ಬಿಜೆಪಿ ಸೇರುವಂತಾಯಿತು. ಲೋಕಸಭಾ ಚುನಾವಣೆಯಲ್ಲಿ ಶೋಭಾ ಅವರಿಗೆ ಪುಲಿಕೇಶಿ ನಗರ ಕ್ಷೇತ್ರದಿಂದ ಹೆಚ್ಚು ಲೀಡ್‌ ಕೊಡಿಸಲು ಹೆಚ್ಚು ಶ್ರಮವಹಿಸುತ್ತೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT