ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ರಾಯಚೂರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಅದ್ದೂರಿ ಸ್ವಾಗತ

Published 30 ಮಾರ್ಚ್ 2024, 8:06 IST
Last Updated 30 ಮಾರ್ಚ್ 2024, 8:06 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾದ ನಂತರ ಮೊದಲ ಬಾರಿಗೆ ಎಡೆದೊರೆ ನಾಡಿಗೆ ಆಗಮಿಸಿದ ಕಾಂಗ್ರೆಸ್‌ ಅಭ್ಯರ್ಥಿ ಜಿ.ಕುಮಾರ ನಾಯಕ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.

ತೆರೆದ ವಾಹನದಲ್ಲೇ ಬಂದ ಜಿ.ಕುಮಾರ ನಾಯಕ ಅವರು ಡಾ.ಬಿ.ಆರ್‌.ಅಂಬೇಡ್ಕರ್, ಬಸವೇಶ್ವರ, ವಾಲ್ಮೀಕಿ ಸೇರಿದಂತೆ ಪ್ರಮುಖ ವೃತ್ತಗಳಿಗೆ ತೆರಳಿಗೆ ಮಹಾನ್‌ ನಾಯಕರಿಗೆ ಹೂಮಾಲೆ ಹಾಕಿದರು. ಇದಕ್ಕೂ ಮೊದಲು ಕಾರ್ಯಕರ್ತರು ಜಿ.ಕುಮಾರನಾಯಕ ಅವರಿಗೆ ಕ್ರೇನ್‌ ಮೂಲಕ ಬೃಹತ್‌ ಮಾಲೆಯನ್ನು ಹಾಕಿದರು.

ಉರಿ ಬಿಸಿಲಿನ್ನೂ ಲೆಕ್ಕಿಸದೇ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಧ್ವಜವನ್ನು ಗಾಳಿಯಲ್ಲಿ ತೇಲಾಡಿಸಿದರು. ನಂತರ ಕಾಂಗ್ರೆಸ್‌ ಅಭ್ಯರ್ಥಿಯ ಪರ ಘೋಷಣೆಗಳನ್ನು ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT